ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ಚರ್ಚೆಗೆ ಆಹ್ವಾನಿಸಿದ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಲೈಂಗಿಕ ಕಿರುಕುಳದ ಆರೋಪದ ಮೇಲೆ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (WFI) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಸರ್ಕಾರ ಮಾತುಕತೆಗೆ ಆಹ್ವಾನಿಸಿದೆ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕ್ರೀಡಾ ಸಚಿವರು,“ಸರ್ಕಾರವು ಕುಸ್ತಿಪಟುಗಳೊಂದಿಗೆ ಅವರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಸಿದ್ಧವಾಗಿದೆ. ನಾನು ಮತ್ತೊಮ್ಮೆ ಕುಸ್ತಿಪಟುಗಳನ್ನು ಅದಕ್ಕಾಗಿ ಆಹ್ವಾನಿಸಿದ್ದೇನೆ” ಎಂದು ತಿಳಿಸಿದ್ದಾರೆ.

ಕುಸ್ತಿಪಟುಗಳು ಶನಿವಾರ ಅಮಿತ್ ಶಾ ಅವರೊಂದಿಗೆ ಸಭೆ ನಡೆಸಿದ್ದಾರೆ ಎಂದು ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಸಮಸ್ಯೆಯನ್ನು ಬಗೆಹರಿಸುವುದಾಗಿ ಗೃಹ ಸಚಿವರು ಭರವಸೆ ನೀಡಿದ್ದಾರೆ ಎಂದು ಪೂನಿಯಾ ಹೇಳಿದ್ದರು.

“ಪ್ರತಿಭಟನೆಯು ಇನ್ನೂ ಕೊನೆಯಾಗಿಲ್ಲ, ಅದು ಮುಂದುವರಿಯುತ್ತದೆ. ಅದನ್ನು ಹೇಗೆ ಮುಂದಕ್ಕೆ ಕೊಂಡೊಯ್ಯಬೇಕು ಎಂಬುದರ ಕುರಿತು ನಾವು ಕಾರ್ಯತಂತ್ರ ರೂಪಿಸುತ್ತಿದ್ದೇವೆ. ಕ್ರೀಡಾಪಟುಗಳು ಸರ್ಕಾರದ ಪ್ರತಿಕ್ರಿಯೆಯಿಂದ ತೃಪ್ತರಾಗಿಲ್ಲ, ಸರ್ಕಾರವೂ ನಮ್ಮ ಬೇಡಿಕೆಗಳನ್ನು ಒಪ್ಪುವುದಿಲ್ಲ” ಎಂದು ಪುನಿಯಾ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!