July 16, 2026
Thursday, July 16, 2026
spot_img

ಮಾಲೆ ಧರಿಸಿ ಶಬರಿಮಲೆ ಯಾತ್ರೆಗೆ ಹೊರಟ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೇಂದ್ರ ಸರ್ಕಾರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಇಂದು ಬೆಳಗಿನ ಜಾವ ಶಬರಿಮಲೆ ಯಾತ್ರೆಗೆ ತೆರಳಿದ್ದಾರೆ.

ಇಂದು ಬೆಳಗಿನ ಜಾವ ಕೊಚ್ಚಿನ್‌ ನಗರದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಶಬರಿಮಲೆ ಯಾತ್ರೆಗೆ ಹೊರಟಿದ್ದಾರೆ. ಮಧ್ಯಾಹ್ನ ಪಂಪಾ ನದಿ ತೀರಕ್ಕೆ ತೆರಳಲಿದ್ದಾರೆ. ಆಮೇಲೆ ಹಂಪಿಯಲ್ಲಿ ಪುಣ್ಯಸ್ನಾನ ಮಾಡಿ ಶಬರಿಮಲೆಯತ್ತ ಪ್ರಯಾಣ ಬೆಳೆಸಲಿದ್ದಾರೆ.

ಸಂಜೆ ಅಯ್ಯಪ್ಪ ಸನ್ನಿಧಿಯಲ್ಲಿ ಪಡಿ ಪೂಜೆಯಲ್ಲಿ ಎಚ್‌ಡಿಕೆ ಭಾಗಿಯಾಗಲಿದ್ದಾರೆ. ತದನಂತರ ಅಯ್ಯಪ್ಪ ಸ್ವಾಮಿಗೆ ನಡೆಯುವ ಪುಷ್ಪ ಅಭಿಷೇಕದಲ್ಲಿ ಭಾಗಿಯಾಗಲಿದ್ದಾರೆ.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಮಾಜಿ ಮಂತ್ರಿಗಳಾದ ಸಿ.ಎಸ್. ಪುಟ್ಟರಾಜು, ಸಾ.ರಾ. ಮಹೇಶ್, ವಿಧಾನ ಪರಿಷತ್ ಸದಸ್ಯ ಭೋಜೇಗೌಡರು, ಶಾಸಕರಾದ ಶರಣಗೌಡ ಕಂದಕೂರ, ಮಾಜಿ ಶಾಸಕರಾದ ಮಾಗಡಿ ಮಂಜುನಾಥ್, ಹೆಚ್.ಎಂ. ರಮೇಶ್ ಗೌಡ ಸೇರಿದಂತೆ 30ಕ್ಕೂ ಹೆಚ್ಚು ಅಯ್ಯಪ್ಪ ಭಕ್ತರ ತಂಡದೊಂದಿಗೆ ಕೇಂದ್ರ ಸಚಿವರು ಯಾತ್ರೆ ಕೈಗೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !