ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ ಉಂಟಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ.
ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ವೇಳೆ ಹೆಚ್.ಡಿ ಕುಮಾರಸ್ವಾಮಿಗೆ ಮೂಗಿನಲ್ಲಿ ರಕ್ತಸ್ರಾವ ಉಂಟಾಗಿತ್ತು. ಕೂಡಲೇ ಅವರು ಜಯನಗರದಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು.ವೈದ್ಯರು ಚಿಕಿತ್ಸೆ ನೀಡಿದ್ದು, ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಈ ಬಳಿಕ ಆಸ್ಪತ್ರೆಯ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲಸದ ಒತ್ತಡದಿಂದ ಒಮ್ಮೊಮ್ಮೆ ಹೀಗೆ ಆಗುತ್ತದೆ. ನನ್ನ ಆರೋಗ್ಯ ಹದಗೆಟ್ಟಿಲ್ಲ. ಈಗ ಚಿಕಿತ್ಸೆಯ ಬಳಿಕ ಗುಣಮುಖರಾಗಿದ್ದೇನೆ. ಕೆಲ ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ ಎಂದರು.