ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಕಡತಕ್ಕೆ ಸಹಿ ಹಾಕಿದ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕೇಂದ್ರ ಉಕ್ಕು ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಹೆಚ್​ಡಿ ಕುಮಾರಸ್ವಾಮಿ ಅವರು ಮೊದಲಿಗೆ ಕರ್ನಾಟಕಕ್ಕೆ ಸಂಬಂಧಿಸಿದ ಕಡತಕ್ಕೆ ಸಹಿ ಹಾಕಿದ್ದಾರೆ.

ಈ ಖುಷಿಯನ್ನು ತಮ್ಮ ಟ್ವಿಟರ್​ನಲ್ಲಿ ಹಂಚಿಕೊಂಡಿರುವ ಹೆಚ್​ಡಿ ಕುಮಾರಸ್ವಾಮಿ, ಕೇಂದ್ರದ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಕಡತಕ್ಕೆ ಸಹಿ ಹಾಕಿದೆ. ಅದು ಕರ್ನಾಟಕಕ್ಕೆ ಸಂಬಂಧಿಸಿದ ಕಡತ ಎನ್ನುವುದು ವಿಶೇಷ ಎಂದು ಬರೆದುಕೊಂಡಿದ್ದಾರೆ.

ಕೇಂದ್ರ ಸರ್ಕಾರ ಉಕ್ಕು ಮತ್ತು ಬೃಹತ್​ ಕೈಗಾರಿಕಾ ಸಚಿವರಾಗಿ ಕಳೆದ ಜೂನ್​ 9ರಂದು ಪ್ರಮಾಣ ವಚನ ಸ್ವೀಕರಿಸಿದ್ದ ಹೆಚ್​ಡಿ ಕುಮಾರಸ್ವಾಮಿ ಅಧಿಕಾರ ಸ್ವೀಕರಿಸಿಕೊಂಡ ಬಳಿಕ ದೇವದಾರಿ ಕಬ್ಬಿಣದ ಅದಿರು ಗಣಿ ಕಾರ್ಯಾಚರಣೆಗಾಗಿ ಕೆಐಓಸಿಎಲ್​ ಲಿಮಿಟೆಡ್‌ನ ಮೊದಲ ಕಡತಕ್ಕೆ ಸಹಿ ಹಾಕಿದ್ದಾರೆ.

https://x.com/hd_kumaraswamy/status/1800888223100776782?ref_src=twsrc%5Etfw%7Ctwcamp%5Etweetembed%7Ctwterm%5E1800888223100776782%7Ctwgr%5E7125230964310cf732d354bc3097ee7fab11ea9d%7Ctwcon%5Es1_&ref_url=https%3A%2F%2Ftv9kannada.com%2Fkarnataka%2Fhd-kumaraswamy-signed-the-first-file-related-to-karnataka-after-assuming-office-as-union-minister-of-steel-taja-suddi-ggs-849236.html

ರಾಷ್ಟ್ರದ ಆರ್ಥಿಕತೆಯನ್ನು ಗಣನೀಯವಾಗಿ ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿರುವ ಉಕ್ಕಿನ ವಲಯದಲ್ಲಿ ನಡೆಯುತ್ತಿರುವ ಕೆಲಸಗಳು ಮತ್ತು ಚಟುವಟಿಕೆಗಳ ಬಗ್ಗೆ ವಿವರವಾದ ಮಾಹಿತಿಯನ್ನು ಅಧಿಕಾರಿಗಳಿಂದ ಹೆಚ್​ಡಿ ಕುಮಾರಸ್ವಾಮಿ ಪಡೆದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!