ಹೊಸದಿಗಂತ ಡಿಜಿಟಲ್ ಡೆಸ್ಕ್:
ಪದ್ಮಭೂಷಣ ಗೌರವ ಪುರಸ್ಕೃತರಾದ ಹಿರಿಯ ನಟ ಡಾ. ಅನಂತನಾಗ್ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬೆಂಗಳೂರಿನಲ್ಲಿ ಇಂದು ಸನ್ಮಾನಿಸಿ, ಅಭಿನಂದಿಸಿದರು.
ಇಂದು ಸಂಜೆ, ಅನಂತನಾಗ್ ಅವರ ಮನೆಗೆ ತೆರಳಿದ ಸಚಿವ ಪ್ರಲ್ಹಾದ್ ಜೋಶಿ ಅವರು, ಡಾ. ಅನಂತನಾಗ್ ಮತ್ತು ಪತ್ನಿ ಗಾಯತ್ರಿ ಅನಂತನಾಗ್ ಅವರನ್ನು ಶಾಲು ಹೊದಿಸಿ ಸನ್ಮಾನಿಸಿದರು.
ಈ ವೇಳೆ ಮಾತನಾಡಿದ ನಟ ಅನಂತನಾಗ್, ಭಾರತ ಸರ್ಕಾರ ಕಲಾವಿದರಿಗೆ ಹೆಚ್ಚಿನ ಪ್ರೋತ್ಸಾಹ, ಉತ್ತೇಜನ ನೀಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕಲಾ ಕ್ಷೇತ, ಸಂಗೀತ, ರಂಗಭೂಮಿ, ಸಾಹಿತ್ಯ, ಸಾಮಾಜಿಕ ಕಾರ್ಯ ಹೀಗೆ ಸರ್ವ ರಂಗದಲ್ಲೂ ತೊಡಗಿರುವಂಥ ಅಸಾಮಾನ್ಯರನ್ನು ಗುರುತಿಸಿ ಪದ್ಮಭೂಷಣದಂತಹ ಅತ್ಯುನ್ನತ ಗೌರವ ಪುರಸ್ಕಾರ ನೀಡುತ್ತಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.
ಹೆಸರಾಂತ ವಯೊಲಿನ್ ವಾದಕ ಲಕ್ಷ್ಮಿನಾರಾಯಣ ಸುಬ್ರಮಣಿಯಂ, ತೊಗಲು ಬೊಂಬೆಯಾಟದ ಹಿರಿಯ ಕಲಾವಿದೆ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ, ಪ್ರಸಿದ್ಧ ವೈದ್ಯೆ ವಿಜಯಲಕ್ಷ್ಮಿ ದೇಶಮಾನೆ ಹೀಗೆ ಅನೇಕ ಸಾಧಕರನ್ನು ಗುರುತಿಸಿ ಪದ್ಮಭೂಷಣ ಮತ್ತು ಅನೇಕರಿಗೆ ಪದ್ಮವಿಭೂಷಣ, ಪದ್ಮಶ್ರೀ ಪ್ರಶಸ್ತಿ ನೀಡಿ, ಸಾಧನೆಗೆ ಗೌರವ ತೋರಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಅವರು ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.