Wednesday, September 27, 2023

Latest Posts

ಕೇಂದ್ರ ಸಚಿವ ಕಿಶನ್ ರೆಡ್ಡಿಗೆ ‘ಗ್ಲೋಬಲ್ ಇನ್​ಕ್ರೆಡಿಬಲ್ ಇಂಕ್ ಲೀಡರ್ಶಿಪ್ ಅವಾರ್ಡ್’ ಪ್ರದಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಪ್ರವಾಸೋದ್ಯಮ ಸಚಿವ ಜಿ ಕಿಶನ್ ರೆಡ್ಡಿ ಅವರಿಗೆ ಯುಎಸ್ ಇಂಡಿಯಾ ಎಸ್ಎಂಇ ಕೌನ್ಸಿಲ್ ಸಂಸ್ಥೆಯ ಪ್ರತಿಷ್ಠಿತ ‘ಗ್ಲೋಬಲ್ ಇನ್​ಕ್ರೆಡಿಬಲ್ ಇಂಕ್ ಲೀಡರ್ಶಿಪ್ ಅವಾರ್ಡ್’ ನೀಡಿ ಗೌರವಿಸಲಾಯಿತು.

ಪ್ರವಾಸೋದ್ಯಮ ಮತ್ತು ಭಾರತದ ಶ್ರೀಮಂತ ಸಂಸ್ಕೃತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಅವರ ಪ್ರಯತ್ನ ಗುರುತಿಸಿ ಅಮೆರಿಕದ ಮೇರಿಲ್ಯಾಂಡ್ ರಾಜ್ಯದ ಗಣ್ಯರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಈ ಕುರಿತು ಟ್ವೀಟ್ ಮಾಡಿ ಕುಷಿಹಂಚಿಕೊಂಡ ಕೇಂದ್ರ ಸಚಿವರು, “ಅಮೆರಿಕ ಮತ್ತು ಭಾರತದ ನಡುವೆ ವ್ಯಾಪಾರ, ವಾಣಿಜ್ಯ ಮತ್ತು ಜನರ ನಡುವಿನ ವಿನಿಮಯ ಕಾರ್ಯಕ್ರಮಗಳನ್ನು ಉತ್ತೇಜಿಸುವ ಸಂಸ್ಥೆಯಾದ ಯುಎಸ್ ಇಂಡಿಯಾ ಎಸ್ಎಂಇ ಕೌನ್ಸಿಲ್​ನಿಂದ ‘ಲೀಡರ್ಶಿಪ್ ಅವಾರ್ಡ್’ ಪಡೆದಿದ್ದಕ್ಕೆ ಕೃತಜ್ಞನಾಗಿದ್ದೇನೆ” ಎಂದರು.

 

ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನ ಮತ್ತು ನಾಯಕತ್ವದಲ್ಲಿ ಪ್ರವಾಸೋದ್ಯಮ ಮತ್ತು ಭಾರತದ ಶ್ರೀಮಂತ ಸಂಸ್ಕೃತಿಯನ್ನು ಉತ್ತೇಜಿಸುವ ಪ್ರಯತ್ನಗಳನ್ನು ಗುರುತಿಸಿ ಅಮೆರಿಕದ ಮೇರಿಲ್ಯಾಂಡ್ ರಾಜ್ಯದ ಗಣ್ಯರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು” ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!