ಹೊಸದಿಗಂತ ಡಿಜಿಟಲ್ ಡೆಸ್ಕ್:
ಜುಲೈ 5 ರಂದು ಬೆಳಗ್ಗೆ 10 ಗಂಟೆಗೆ ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಜನತಾದರ್ಶನ ಕಾರ್ಯಕ್ರಮವನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದ ಕುಮಾರಸ್ವಾಮಿ ಹಮ್ಮಿಕೊಂಡಿದ್ದಾರೆ.
ಕೇಂದ್ರ ಸಚಿವರಾದ ಬಳಿಕ ಪ್ರಥಮ ಬಾರಿಗೆ ಜನತಾದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಕುಮಾರಸ್ವಾಮಿ ಅವರು ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಿ, ಜನತಾದರ್ಶನ ನಡೆಸುವ ಮೂಲಕ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಲಿದ್ದಾರೆ.