ಹೊಸ ದಿಗಂತ ವರದಿ,ಅಂಕೋಲಾ :
ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆಗಳ ಸಚಿವ ಕುಮಾರಸ್ವಾಮಿ ಅವರು ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿತ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದುರ್ಘಟನೆ ಮತ್ತು ಹಾನಿಯ ವಿವರಗಳನ್ನು ಅಧಿಕಾರಿಗಳಿಂದ ಪಡೆದುಕೊಂಡ ಕುಮಾರಸ್ವಾಮಿಯವರು ಇನ್ನಷ್ಟು ದುರಂತ ಸಂಬಂಧಿಸಿದಂತೆ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಇಂಥ ಒಂದು ದುರ್ಘಟನೆ ನಡೆದ ಸಂದರ್ಭದಲ್ಲಿ ರಾಜಕೀಯವಾಗಿ ಒಬ್ಬರ ಮೇಲೆ ಒಬ್ಬರು ಆರೋಪ ಮಾಡುವ ಬದಲು ಎಲ್ಲರೂ ಒಂದಾಗಿ ನೊಂದವರ ಜೊತೆಗೆ ನಿಲ್ಲಬೇಕಿದೆ. ಕೇಂದ್ರದಿಂದ ಯಾವ ರೀತಿಯಲ್ಲಿ ಪರಿಹಾರ ಒದಗಿಸಲು ಸಾಧ್ಯತೆಗಳು ಇವೆ ಎನ್ನುವ ಕುರಿತು ಪ್ರಧಾನ ಮಂತ್ರಿಗಳೊಂದಿಗೆ ಚರ್ಚೆ ನಡೆಸುವುದಾಗಿ ಅವರು ತಿಳಿಸಿದರು.