ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಹುಶಃ ಕೇಂದ್ರ ಸಚಿವರು ಭಾಗಿಯಾಗಿರಬಹುದು ಎಂದು ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.
ರನ್ಯಾ ಪ್ರಕರಣದಲ್ಲಿ ರಾಜ್ಯದ ಸಚಿವರ ಪಾತ್ರ ಹೇಗೆ ಇರಲು ಸಾಧ್ಯ, ಬಹುಶಃ ಕೇಂದ್ರ ಸಚಿವರು ಭಾಗಿಯಾಗಿರಬಹುದು ಎಂದು ಹೇಳಿದ್ದಾರೆ.
ವಿಮಾನ ನಿಲ್ದಾಣಗಳಲ್ಲಿ ಶಿಷ್ಟಾಚಾರದ ಜವಾಬ್ದಾರಿ ಕೇಂದ್ರ ಸರ್ಕಾರದ ಅಡಿ ಬರುತ್ತದೆ. ಹೀಗಾಗಿ ನಮ್ಮ ಸರ್ಕಾರದ ಯಾವುದೇ ಸಚಿವರು ಭಾಗಿಯಾಗಿರುವ ಸಾಧ್ಯತೆಗಳಿಲ್ಲ ಎಂದು ತಿಳಿಸಿದ್ದಾರೆ.