ಹೊಸದಿಗಂತ ವರದಿ, ತುಮಕೂರು:
ರಾಹುಲ್ ಗಾಂಧಿಗೆ ಹೆಣ್ಣು ಮಕ್ಕಳ ಬಗ್ಗೆ ಗೊತ್ತಿದ್ದರೆ. ಅನುಕಂಪವಿದ್ದರೆ ಇದುವರೆಗೆ ಅವರು ವಿವಾಹವಾಗಿ ಬಿಡುತ್ತಿದ್ದರು ಎಂದು ಕೇಂದ್ರ ಸಚಿವ ನಾರಾಯಣ ಸ್ವಾಮಿ ರಾಹುಲ್ ಗಾಂಧಿ ಅವರನ್ನು ಗೇಲಿ ಮಾಡಿದ್ದಾರೆ.
ತುಮಕೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ಅವರು ಹಿಜಾಬ್ ವಿವಾದದ ಹೆಸರಿನಲ್ಲಿ ಅಲ್ಪಸಂಖ್ಯಾತ ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕನ್ನು ಕುಸಿದು ಅವರ ಭವಿಷ್ಯ ಕಸಿಯುವ ಕೆಲಸ ಮಾಡಲಾಗುತ್ತಿದೆ ಎಂಬ ರಾಹುಲ್ ಆರೋಪಕ್ಕೆ ಕೇಂದ್ರ ಸಚಿವರು ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.