ವಿಶ್ವದ ಮೊದಲ ಎಥನಾಲ್ ಇಂಧನದ ಟೊಯೋಟಾ ಇನ್ನೋವಾ ಕಾರು ಬಿಡುಗಡೆ ಮಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಎಲೆಕ್ಟ್ರಿಕ್ ಮತ್ತು ಪರ್ಯಾಯ ಇಂಧನದತ್ತ ದಿಟ್ಟ ಹೆಜ್ಜೆ ಇಡುತ್ತಿರುವ ಭಾರತದಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಸಂಸ್ಥೆಯ ಜನಪ್ರಿಯ ಇನ್ನೋವಾ ಕಾರಿನ ಹೊಸ ಆವೃತ್ತಿ ಬಿಡುಗಡೆ ಆಗಿದೆ.

ಎಥನಾಲ್ ಇಂಧನದಿಂದ ಕಾರ್ಯನಿರ್ವಹಿಸುವ ವಿಶ್ವದ ಮೊದಲ ಕಾರು ಇದಾಗಿದೆ. ಟೊಯೊಟಾ ಇನ್ನೊವಾದ ಈ ಹೊಸ ಆವೃತ್ತಿಯ ಕಾರನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari)ಬಿಡುಗಡೆ ಮಾಡಿದರು.

ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರದೀಪ್ ಸಿಂಗ್ ಪುರಿ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟೊಯೋಟಾ ಇನ್ನೋವಾದ ಈ ಹೊಸ ಆವೃತ್ತಿಯು ಬಿಎಸ್-6 (ಸ್ಟೇಜ್ 2) ಹಂತದ ಕಾರಾಗಿದ್ದು,ಪ್ರೋಟೋಟೈಪ್ ಅನ್ನು ಸಿದ್ಧಪಡಿಸಲಾಗಿದೆ. ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಸಂಸ್ಥೆ ಬಿಡುಗಡೆ ಮಾಡಿದ ಹೇಳಿಕೆ ಪ್ರಕಾರ ಇದು ವಿಶ್ವದ ಮೊದಲ ಬಿಎಸ್-6 ಶ್ರೇಣಿಯ ವಿದ್ಯುದೀಕೃತ ಫ್ಲೆಕ್ಸ್ ಫುಯೆಲ್ ವಾಹನವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!