ಕರ್ನಾಟಕದ ನಾಡಗೀತೆಯನ್ನು ಕೊಂಡಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಹೊಸ ದಿಗಂತ ವರದಿ, ಶಿವಮೊಗ್ಗ:

ನಾನು ಹಲವು ರಾಜ್ಯಗಳಲ್ಲಿ ಸಂಚರಿಸುತ್ತಾ ಇರುತ್ತೇನೆ. ಆದರೆ ಕರ್ನಾಟಕಕ್ಕೆ ಬಂದಾಗ ಏನೋ ಆನಂದ ಸಿಗುತ್ತದೆ. ಅದರಲ್ಲೂ ಕರ್ನಾಟಕದ ನಾಡ ಗೀತೆಯನ್ನು ಕೇಳಿದಾಗ ಆನಂದ ಸಿಗುತ್ತದೆ. ಈ ಗೀತೆಯನ್ನು ರಚಿಸಿದವರಿಗೆ ಮತ್ತು ಸಂಗೀಯ ಸಂಯೋಜನೆ ಮಾಡಿದವರಿಗೆ ಅಭಿನಂದಿಸುತ್ತೇನೆ ಎಂದು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದರು.

ಶಿವಮೊಗ್ಗ ನಗರದ ನೆಹರು ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು , 2024ರ ಕೊನೆಗೆ ಕರ್ನಾಟಕದ ರಾಷ್ಟ್ರೀಯ ಹೆದ್ದಾರಿಗಳು ಅಮೆರಿಕಾದ ಹೆದ್ದಾರಿಗಳಿಗೆ ಸರಿಸಮನಾಗಲಿವೆ. ಸುಮಾರು 3 ಲಕ್ಷ ಕೋಟಿ ಕಾಮಗಾರಿಗಳು ದೇಶದಲ್ಲಿ ನಡೆಯುತ್ತಿವೆ. ಕನ್ಯಾಕುಮಾರಿಯಿಂದ ಕಾಶ್ಮೀರ ತನಕ ಎಕ್ಸ್‌ಪ್ರೆಸ್ ಹೈವೇ ನಿರ್ಮಾಣ ಆಗಿದೆ ಎಂದರು. ತುಮಕೂರು-ಶಿವಮೊಗ್ಗ ಚತುಷ್ಪಥ ರಸ್ತೆ ನಿರ್ಮಾಣ 2025ರ ಜನವರಿ ವೇಳೆಗೆ ಪೂರ್ಣಗೊಳ್ಳಲಿದೆ. ಆಗ ಬೆಂಗಳೂರಿಗೆ ಶಿವಮೊಗ್ಗದಿಂದ ಕೇವಲ 3 ಗಂಟೆಯಲ್ಲಿ ಪ್ರಯಾಣ ಮಾಡಬಹುದು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!