ಕೇಂದ್ರ ಸಚಿವ ನಿತಿನ್‌ ಗಡ್ಕರಿಯಿಂದ ರಾಜ್ಯದಲ್ಲಿ 19,930 ಕೋಟಿ ರೂ. ಮೊತ್ತದ ಹೆದ್ದಾರಿ ಕಾಮಗಾರಿ ಚಾಲನೆ

ಹೊಸದಿಗಂತ ವರದಿ, ಹುಬ್ಬಳ್ಳಿ:

ಇಂದು ರಾಜ್ಯಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಆಗಮಿಸಲಿದ್ದು, ಹಲವು ಮಹತ್ವಾಕಾಂಕ್ಷಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ರಾಜ್ಯದಲ್ಲಿ ಒಟ್ಟು 19930 ಕೋಟಿ ರೂ. ಮೊತ್ತದ ವಿವಿಧ ಹೆದ್ದಾರಿ ಕಾಮಗಾರಿಗಳಿಗೆ ಇಂದು ಚಾಲನೆ ಸಿಗಲಿದೆ. ಈ ಮೂಲಕ ರಾಜ್ಯದಲ್ಲಿ 1928 ಕಿ.ಮೀ. ಉದ್ದದ 44 ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಸಾಕಾರಗೊಳ್ಳಲಿವೆ.
ಇಂದು ಬೆಳಗಾವಿ, ಹುಬ್ಬಳ್ಳಿ ಹಾಗು ಮಂಗಳೂರಿನಲ್ಲಿನ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್‌ ಬೊಮ್ಮಾಯಿ, ಹೆದ್ದಾರಿ ಯೋಜನೆಗಳಿಂದ ಮುಂದಿನ ದಿನಗಳಲ್ಲಿ ಕರ್ನಾಟಕದ ಸಾರಿಗೆ ಚಿತ್ರಣವೇ ಬದಲಾಗಲಿದೆ ಎಂದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ಧಿಪರವಾದ ಯೋಜನೆಗಳಿಂದ ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಭದ್ರ ಬುನಾದಿಯಾಗಲಿದೆ ಎಂದು ತಿಳಿಸಿದರು.
. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರ ರಾಜ್ಯದ ಬಗೆಗಿನ ಕಳಕಳಿಯಿಂದ ಹಲವಾರು ಅಭಿವೃದ್ಧಿ ಯೋಜನೆಗಳು ಕರ್ನಾಟಕದಲ್ಲಿ ಅನುಷ್ಠಾನವಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನೇತೃತ್ವದಲ್ಲಿ ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಹಾಗೂ ರಾಜ್ಯ ಹೆದ್ದಾರಿಗಳ ಉನ್ನತೀಕರಣದ ಯೋಜನೆಗಳು ಜಾರಿಯಾಗುತ್ತಿವೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!