ಹೊಸದಿಗಂತ ವರದಿ ಶಿವಮೊಗ್ಗ :
ಶಿವಮೊಗ್ಗ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಫೆಬ್ರವರಿ 22ರಂದು ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲು ನಗರಕ್ಕೆ ಆಗಮಿಸಲಿದ್ದಾರೆ ಎಂದು ಸಂಸದ ಬಿ ವೈ. ರಾಘವೇಂದ್ರ ತಿಳಿಸಿದರು.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಗಡ್ಕರಿಯವರು ನೆರವೇರಿಸಲಿದ್ದಾರೆ . ನಗರದ ನೆಹರು ಕ್ರೀಡಾಂಗಣದಲ್ಲಿ ಸಮಾರಂಭ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ ದಕ್ಷಿಣ ವಲಯದ ಆರು ಜಿಲ್ಲೆಗಳಿಗೆ ಸೇರಿದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು. ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ ,ಹಾಸನ, ಚಿಕ್ಕಮಗಳೂರು, ಉಡುಪಿ , ದಕ್ಷಿಣ ಕನ್ನಡ ಜಿಲ್ಲೆಗಳ ಸುಮಾರು 6168 ಕೋಟಿ ವೆಚ್ಚದ 296. 92 ಕಿಲೋಮೀಟರ್ ಉದ್ದದ ಕಾಮಗಾರಿಗಳಿಗೆ ಚಾಲನೆ ದೊರೆಯಲಿದೆ. ಇದರಲ್ಲಿ ಸುಮಾರು 18 ಕಾಮಗಾರಿಗಳು ಸೇರಿವೆ ಎಂದು ತಿಳಿಸಿದರು.