ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………….
ಹೊಸ ದಿಗಂತ ವರದಿ,ಹುಬ್ಬಳ್ಳಿ:
ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬಗ್ಗೆ ನನಗೆ ಗೊತ್ತಿಲ್ಲ. ವಿಸ್ತರಣೆ ಮಾಡುವ ತೀರ್ಮಾನ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕೈಗೊಳ್ಳುತ್ತಾರೆ. ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ನಗರದಲ್ಲಿ ಭಾನುವಾರ ಕೇಂದ್ರ ಸಂಪುಟ ವಿಸ್ತರಣೆ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇದರ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಆದರೂ ನನ್ನ ಮಟ್ಟದಲ್ಲಿ ಆಗೋದಿಲ್ಲ. ಪ್ರಧಾನ ಮಂತ್ರಿ ಮೋದಿಯವರು ರಾಷ್ಟ್ರೀಯ ಅಧ್ಯಕ್ಷರು ತೀರ್ಮಾನ ಮಾಡುತ್ತಾರೆ. ಈ ಬಗ್ಗೆ ಮಾಧ್ಯಗಳಲ್ಲಿ ನೋಡಿದ್ದೇನೆ ಎಂದರು.
ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ. ತಮ್ಮ ರಾಜ್ಯದ ಜನರ ಸಲುವಾಗಿ ಹಗಲಿರಳು ದುಡಿಯುತ್ತಿದ್ದಾರೆ. ಅವರ ಬದಲಾವಣೆ ವಿಚಾರವೂ ಊಹಾಪೋಹ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ನಾಯಕರು ಕೋವಿಡ್ ನಿರ್ವಹಣೆಯಲ್ಲಿ ಮೋದಿಯವರು ವಿಫಲರಾಗಿದ್ದಾರೆ ಎನ್ನುವ ಮಾತಿಗೆ ಆ ಪಕ್ಷದವರಿಗೆ ಮಾತನಾಡುಲು ಏನು ಇದೇ ಹೇಳಿ? ಕಾಂಗ್ರೆಸ್ನವರಿಗೆ ಇಲ್ಲಿವರೆಗೂ ಬಿಜೆಪಿ ಸರ್ಕಾರದ ಲೋಪದೋಷಗಳನ್ನು ಹೇಳಲು ಆಗಿಲ್ಲ. ಎರಡನೇ ಅಲೆ ಬೇಗ ಸೋಂಕು ಹರಡಿದ್ದರಿಂದ ಸ್ವಲ್ಪ ತೊಂದರೆಯಾಗಿತ್ತು. ಆದರೆ, ಮೋದಿಯವರು ಪರಿಶ್ರಮ ಪಟ್ಟು ಬಹಳ ಬೇಗ ನಿರ್ವಹಣೆ ಮಾಡಿದರು. ಪ್ರಪಂಚದ ಯಾವುದೇ ದೇಶದಲ್ಲಿ ವಿರೋಧ ಪಕ್ಷಗಳು ಕೋವಿಡ್ ಇಟ್ಟುಕೊಂಡು ರಾಜಕಾರಣ ಮಾಡಿಲ್ಲ. ಆದರೆ, ಕಾಂಗ್ರೆಸ್ ಪಕ್ಷ ಹಣ ಮತ್ತು ಹೆಣದ ಮೇಲೆ ರಾಜಕಾರಣ ಮಾಡುತ್ತಿದೆ ಎಂದರು.
ಪಂಜಾಬ ಮತ್ತು ರಾಜಸ್ಥಾನದಲ್ಲಿ ದೊಡ್ಡ ಪ್ರಮಾಣದಲ್ಲಿ ಲಸಿಕೆ ವೆಸ್ಟ್ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಬೇಜವಬ್ದಾರಿ ಕೆಲಸದಿಂದ ಹೀಗೆ ಆಗಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.