ಹೊಸದಿಗಂತ ವರದಿ, ನಾಗಮಂಗಲ :
ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನಮಠಕ್ಕೆ ಕೇಂದ್ರದ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಭಾನುವಾರ ಭೇಟಿನೀಡಿ ಕ್ಷೇತ್ರಾಧಿದೇವತೆಗಳಿಗೆ ಹಾಗೂ ಭೈರವೈಕ್ಯ ಡಾ.ಬಾಲಗಂಗಾಧರನಾಥಶ್ರೀಗಳ ಮಹಾ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ, ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥಶ್ರೀಗಳ ಆಶೀರ್ವಾದ ಪಡೆದುಕೊಂಡರು.
ಕ್ಷೇತ್ರಪಾಲಕ ಶ್ರೀ ಕಾಲಭೈರವೇಶ್ವರಸ್ವಾಮಿ ದೇಗುಲದಲ್ಲಿ ನಡೆದ ಭಾನುವಾರದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ಸಚಿವರು ಕ್ಷೇತ್ರಾಧಿದೇವತೆಗಳ ದರ್ಶನಾಶೀರ್ವಾದ ಪಡೆದುಕೊಂಡ ನಂತರ ಭೈರವೈಕ್ಯ ಡಾ.ಬಾಲಗಂಗಾಧರನಾಥಶ್ರೀಗಳ ಮಹಾ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥಸ್ವಾಮೀಜಿ ಅವರೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು. ಕ್ಷೇತ್ರಕ್ಕೆ ಭೇಟಿಕೊಟ್ಟ ಸಚಿವರಿಗೆ ಶ್ರೀಮಠದ ಸಂಪ್ರದಾಯದಂತೆ ಶಾಲು ಹೊದಿಸಿ ಏಲಕ್ಕಿ ಹಾರ ಹಾಕಿ ನೆನಪಿನ ಕಾಣಿಕೆ ಕೊಟ್ಟು ಶ್ರೀಗಳು ಆಶೀರ್ವದಿಸಿದರು.