Wednesday, June 29, 2022

Latest Posts

ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸಚಿವ ಮುರಳೀಧರನ್‌ ಅವರ ವಾಹನದ ಮೇಲೆ ದಾಳಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವ ವಿ. ಮುರುಳೀಧರನ್‌ ಅವರ ಕಾರು ಮತ್ತು ಬೆಂಗಾವಲು ವಾಹನದ ಮೇಲೆ ಪಶ್ಚಿಮ ಮಿಡ್ನಾಪುರ ಜಿಲ್ಲೆಯ ಪಂಚಕುರಿ ಹಳ್ಳಿಯ ಬಳಿ ಗುರುವಾರ ಅಪರಿಚಿತ ಗುಂಪೊಂದು ದಾಳಿ ನಡೆಸಿದೆ.
ಚುನಾವಣಾ ಫಲಿತಾಂಶದ ಬಳಿಕ ನಡೆದ ಗಲಭೆಯಲ್ಲಿ ಗಾಯಗೊಂಡಿದ್ದ ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾಗಲು ಅವರು ಪಶ್ಚಿಮ ಮಿಡ್ನಾಪುರ ಜಿಲ್ಲೆಯ ತೆರಳಿದ್ದರು. ಈ ವೇಳೆ
ಸಚಿವರ ಕಾರು ಧ್ವಂಸವಾಗಿದೆ.
ಈ ಕುರಿತು ಟ್ವೀಟ್‌ನಲ್ಲಿ ಆರೋಪಿಸಿದ ಮುರಳೀಧರನ್‌, ‘ಬೆಂಗಾವಲು ವಾಹನಗಳ ಮೇಲಿನ ದಾಳಿಯ ಹಿಂದೆ ಟಿಎಂಸಿ ಗೂಂಡಾಗಳ ಕೈವಾಡಿವಿದೆ’ ಎಂದು ಹೇಳಿದ್ದಾರೆ
ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಮುರಳೀಧರನ್, ‘ಹಿಂಸಾಚಾರದಲ್ಲಿ ಗಾಯಗೊಂಡಿದ್ದ ಪಕ್ಷದ ಕಾರ್ಯಕರ್ತರನ್ನು ಭೇಟಿಯಾಗಲು ನಾನು ಪಶ್ಚಿಮ ಮಿಡ್ನಾಪುರಕ್ಕೆ ತೆರಳಿದ್ದೆ. ಒಬ್ಬೊಬ್ಬರನ್ನೇ ಮಾತನಾಡಿಸುತ್ತಾ, ಮನೆಯಿಂದ ಮನೆಗೆ ತೆರಳುತ್ತಿದ್ದೆ. ಇದ್ದಕ್ಕಿದ್ದಂತೆ ಒಂದು ಗುಂಪು ನನ್ನ ಮೇಲೆ ದಾಳಿ ಮಾಡಿತು’ ಎಂದು ಹೇಳಿದ್ದಾರೆ.
‘ನಾನು ಸುರಕ್ಷಿತವಾಗಿದ್ದೇನೆ. ಆದರೆ ನನ್ನ ಚಾಲಕನಿಗೆ ಗಾಯಗಳಾಗಿವೆ. ಕೆಲವು ಕಾರುಗಳ ಕಿಟಕಿ ಗಾಜುಗಳೂ ಒಡೆದಿವೆ’ ಎಂದು ಸಚಿವರು ತಿಳಿಸಿದ್ದು, ಮುರಳೀಧರನ್ ಅವರೊಂದಿಗೆ ತೆರಳಿದ್ದ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರಾಹುಲ್ ಸಿನ್ಹಾ ‘ಪೊಲೀಸರ ಸಮ್ಮುಖದಲ್ಲೇ ಈ ದಾಳಿ ನಡೆದಿದೆ’ಎಂದು ಆರೋಪಿಸಿದ್ದಾರೆ.
‘ಗುರುವಾರ ಮಧ್ಯಾಹ್ನ 12.30ರ ಸುಮಾರಿಗೆ ಈ ಘಟನೆ ನಡೆದಿದೆ. ಕೆಲವು ಅಪರಿಚಿತ ವ್ಯಕ್ತಿಗಳು ದಾಳಿ ಮಾಡಿದ್ದಾರೆ. ಈ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತೇವೆ’ ಎಂದು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss