ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಹಿರಿಯ ರಾಜಕೀಯ ಮುತ್ಸದ್ದಿ, ಮಾರ್ಗದರ್ಶಕರು ಆಗಿರುವ ದೇವೇಗೌಡರು ಶೀಘ್ರವೇ ಚೇತರಿಸಿಕೊಂಡು ಉತ್ತಮ ಆರೋಗ್ಯವಂತರಾಗಿರಲಿ ಎಂದು ಹಾರೈಸಿದರು. ಇದನ್ನೂ ಓದಿ: ಬಿಹಾರದಲ್ಲಿ ಸೀಟು ಹಂಚಿಕೆ ಇತ್ಯರ್ಥ – ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ಶರಣಗೌಡ ಕಂದಕೂರು ಉಪಸ್ಥಿತರಿದ್ದರು.