ಕಡಿಮೆ ಬೆಲೆಗೆ ಅಕ್ಕಿ, ಗೋಧಿ ಹಿಟ್ಟು ಮಾರಾಟಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

2ನೇ ಹಂತದಲ್ಲಿ ಭಾರತ್ ಅಕ್ಕಿ ಮತ್ತು ಗೋಧಿಯ ಚಿಲ್ಲರೆ ಮಾರಾಟದ ಸಂಚಾರಿ ವಾಹನಗಳಿಗೆ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವ ಪ್ರಲ್ಹಾದ ಜೋಶಿ ಹಾಗೂ ರಾಜ್ಯ ಸಚಿವ ಬಿ.ಎಲ್. ವರ್ಮಾ ಅವರು ದೆಹಲಿಯಲ್ಲಿಂದು ಚಾಲನೆ ನೀಡಿದರು.

ಅಕ್ಕಿ, ಗೋಧಿ, ಬೇಳೆ ಸೇರಿದಂತೆ ದ್ವಿದಳ ಧಾನ್ಯಗಳ ಬೆಲೆಗಳನ್ನು ಮಾರುಕಟ್ಟೆಯಲ್ಲಿ ನಿಯಂತ್ರಣದಲ್ಲಿಡುವ ದೃಷ್ಟಿಯಿಂದ ಭಾರತ್ ಬ್ರಾಂಡ್ ಅಡಿಯಲ್ಲಿ ಪ್ರತಿ ಕೆಜಿ ಭಾರತ್ ಅಕ್ಕಿಯ ಗರಿಷ್ಠ ಮಾರಾಟ ಬೆಲೆ ರೂ. 34 ಹಾಗೂ ಭಾರತ್ ಅಟ್ಟಾ ( ಗೋಧಿ ಹಿಟ್ಟು )ಬೆಲೆ ರೂ. 30 ಆಗಿದೆ.

ಮೊದಲ ಹಂತದ ಸಮಯದಲ್ಲಿ ಸುಮಾರು 15.20 ಲಕ್ಷ ಮೆಟ್ರಿಕ್ ಟನ್ ಭಾರತ್ ಗೋಧಿ ಹಿಟ್ಟು ಮತ್ತು 14.58 ಲಕ್ಷ ಮೆಟ್ರಿಕ್ ಟನ್ ಭಾರತ್ ರೈಸ್ ಅನ್ನು ಸಾಮಾನ್ಯ ಗ್ರಾಹಕರಿಗೆ ಸಬ್ಸಿಡಿ ದರದಲ್ಲಿ ಲಭ್ಯಗೊಳಿಸಲಾಗಿತ್ತು. ಎರಡನೇ ಹಂತದ ಆರಂಭಿಕ ಹಂತದಲ್ಲಿ 3.69 ಲಕ್ಷ ಮೆಟ್ರಿಕ್ ಟನ್ ಗೋಧಿ ಮತ್ತು 2.91 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಚಿಲ್ಲರೆ ಮಾರಾಟಕ್ಕೆ ಲಭ್ಯವಾಗುವಂತೆ ಮಾಡಲಾಗಿದೆ.

ಅಕ್ಕಿ ಮತ್ತು ಗೋಧಿ ಹಿಟ್ಟನ್ನು NCCF, NAFED ಮತ್ತು ಇ-ಕಾಮರ್ಸ್/ಬಿಗ್ ಚೈನ್ ರಿಟೇಲರ್‌ಗಳ ಅಂಗಡಿಗಳು ಮತ್ತು ಮೊಬೈಲ್ ವ್ಯಾನ್‌ಗಳಲ್ಲಿ ಲಭ್ಯವಿರುತ್ತದೆ. 5 ಕೆಜಿ ಮತ್ತು 10 ಕೆಜಿ ಚೀಲಗಳಲ್ಲಿ ಮಾರಾಟ ಮಾಡಲಾಗುತ್ತದೆ. ಅಕ್ಕಿಯ ಬೆಲೆ ಪ್ರತಿ ಕೆಜಿಗೆ 34 ರೂ. ಮತ್ತು ಗೋಧಿ ಹಿಟ್ಟಿನ ಬೆಲೆಯನ್ನು ಪ್ರತಿ ಕೆಜಿಗೆ 29 ರೂ. ನಿಗದಿ ಮಾಡಿದೆ.

ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೋಶಿ, ಭಾರತ ಗೋಧಿ ಹಿಟ್ಟು, ಅಕ್ಕಿಯನ್ನು ಎರಡನೇ ಹಂತದಲ್ಲಿ ಕೊಡುವ ತಿರ್ಮಾನ ಮಾಡಿದೆ. ಮಾರುಕಟ್ಟೆಯಲ್ಲಿ ಬೆಲೆ ನಿಯಂತ್ರಿಸಲು ಇದನ್ನು ಪರಿಚಯಿಸಿದೆ. ಬೆಲೆ ನಿಯಂತ್ರಣ ಫಂಡ್ ಮೂಲಕ ಇದನ್ನು ಮಾಡಲಾಗುತ್ತಿದೆ ಎಂದರು.

ಅಗತ್ಯ ವಸ್ತುಗಳ ಬೆಲೆ 9 ವರ್ಷದಲ್ಲಿ ಬಹುತೇಕ ಸ್ಥಿರವಾಗಿದೆ. ಆದರೆ ಈ ವರ್ಷ ಬೇರೆ ಬೇರೆ ಕಾರಣಗಳಿಂದ ಬೆಲೆ ಏರಿಕೆಯಾಗುತ್ತಿದೆ. ಈಗಾಗಲೇ ಬೇಳೆ ಕಾಳುಗಳನ್ನು ಭಾರತ್ ಬ್ರ್ಯಾಂಡ್ ಮೂಲಕ ಮಾರಾಟ ಮಾಡುತ್ತಿದ್ದೇವೆ. ಅಕ್ಕಿಗೆ 34 ರೂ, ಗೋಧಿ ಹಿಟ್ಟಿಗೆ 29 ಬೆಲೆ ನಿಗದಿ ಮಾಡಿದೆ. ರೈತರಿಗೆ ತೊಂದರೆಯಾಗಬಾರದು ಎಂದು ರೈತರಿಂದ ಸರ್ಕಾರ ಖರೀದಿ ಮಾಡುತ್ತಿದೆ. ಗ್ರಾಹಕರಿಗೆ ಬೆಲೆ ಏರಿಕೆ ಸಮಸ್ಯೆ ಆಗಬಾರದು ಎಂದು ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿದ್ದೇವೆ ಎಂದು ಹೇಳಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!