ಹೊಸದಿಗಂತ ಡಿಜಿಟಲ್ ಡೆಸ್ಕ್:
ಹುಬ್ಬಳ್ಳಿ-ಧಾರವಾಡ ಅಕ್ಕಪಕ್ಕದ ಪಟ್ಟಣಗಳಿಂದ ಹುಬ್ಬಳ್ಳಿಗೆ ಪ್ರಯಾಣಿಸುವವರ ಅನುಕೂಲಕ್ಕಾಗಿ 10 ಹೊಸ ಮೆಮು ರೈಲುಗಳ ಸಂಚಾರ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಲ್ಲಿ ಪ್ರಹ್ಲಾದ್ ಜೋಶಿ ಮನವಿ ಮಾಡಿದ್ದಾರೆ.
ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಧಾರವಾಡ ಸಂಸದ, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ, ಪಟ್ಟಣ ಹಾಗೂ ಗ್ರಾಮಗಳಿಂದ ಹುಬ್ಬಳ್ಳಿಗೆ ಪ್ರಯಾಣಿಸುವವರಿಗಾಗಿ 10 ಹೊಸ ಮೆಮು ರೈಲುಗಳ ಸಂಚಾರ ಆರಂಭಿಸಬೇಕೆಂದು ಒತ್ತಾಯಿಸಿದ್ದಾರೆ.
ಹುಬ್ಬಳ್ಳಿ ಉತ್ತರ ಕರ್ನಾಟಕದ ವಾಣಿಜ್ಯ ರಾಜಧಾನಿ ಆಗಿದ್ದು, ಅಕ್ಕಪಕ್ಕದ ಪಟ್ಟಣ, ಗ್ರಾಮೀಣ ಪ್ರದೇಶಗಳಿಂದ ಪ್ರತಿನಿತ್ಯ ಲಕ್ಷಾಂತರ ಮಂದಿ ಸಂಚರಿಸುತ್ತಿರುತ್ತಾರೆ. ಹಾಗಾಗಿ, ರೈಲುಗಳ ಸಂಚಾರಕ್ಕೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.