ಹಾವೇರಿ ಜಿಲ್ಲೆಯಲ್ಲಿ ಆರೋಗ್ಯ, ಕ್ಷೇಮ ಕೇಂದ್ರ ಸ್ಥಾಪನೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರದ ಆರೋಗ್ಯ ಮಿಷನ್ ಯೋಜನೆಯಡಿ ನಿರ್ಮಿಸಲಾಗಿರುವ ಆರೋಗ್ಯ ಮತ್ತು ಕ್ಷೇಮ ಕೇಂದ್ರವನ್ನು ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಚಳ್ಳಾಳ ಗ್ರಾಮದಲ್ಲಿ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಪ್ರಲ್ಹಾದ್ ಜೋಶಿ ಉದ್ಘಾಟಿಸಿದರು.
ಈ ವೇಳೆ ಶಾಸಕರಾದ ಯಾಸೀರ್ ಅಹಮ್ಮದ್ ಖಾನ್ ಪಠಾಣ್, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಬಳಿಕ ಮಾತನಾಡಿದ ಪ್ರಲ್ಹಾದ್ ಜೋಶಿ, 55.50 ಲಕ್ಷ ಅನುದಾನದಡಿ ಆರೋಗ್ಯ ಮತ್ತು ಕ್ಷೇಮ ಕೇಂದ್ರವನ್ನು ಸ್ಥಾಪಿಸಲಾಗಿದೆ. ಆರೋಗ್ಯ ಮಿಷನ್ , ಆಯುಷ್ಮಾನ್ ಭಾರತ್, ಪ್ರಧಾನಮಂತ್ರಿ ಜನಾರೋಗ್ಯ ಯೋಜನೆಯಡಿ ದೇಶಾದ್ಯಂತ ಆರೋಗ್ಯ ಸೇವೆಗಳನ್ನು ಒದಗಿಸಲಾಗುತ್ತಿದೆ. ಈ ಯೋಜನೆಯಡಿ ದೇಶಾದ್ಯಂತ 1.5 ಲಕ್ಷ ಆರೋಗ್ಯ ಮತ್ತು ಯೋಗಕ್ಷೇಮ ಕೇಂದ್ರಗಳನ್ನು ಸ್ಥಾಪಿಸುವ ಗುರಿ ಹೊಂದಿದ್ದು, ಇದರಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಉಚಿತ ಔಷಧ ವಿತರಣೆ, ತಾಯಿ, ಮಕ್ಕಳ ಆರೋಗ್ಯ, ರೋಗ ತಡೆಗಟ್ಟುವಿಕೆ, ಯೋಗ ಮತ್ತು ಆಯುರ್ವೇದ ಸೇವೆಗಳನ್ನು ಒದಗಿಸಲಾಗುವುದು ಎಂದು ಹೇಳಿದರು.
ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ 22.50 ರೂಪಾಯಿಗೆ ಪ್ರತಿ ಕೆಜಿ ಅಕ್ಕಿ ನೀಡಲಾಗುತ್ತಿದೆ. ದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆಯಾಗುತ್ತಿದೆ ಎಂದರು. ಯಾಸಿರ್ ಅಹಮದ್ ಖಾನ್ ಪಠಾಣ್, ರಾಜ್ಯ ಸರ್ಕಾರ ಬಡಜನರ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!