ಶೆಟ್ಟರ್ ನಿವಾಸಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ದಿಢೀರ್ ಭೇಟಿ

ಹೊಸದಿಗಂತ ವರದಿ ಹುಬ್ಬಳ್ಳಿ:

ಇಲ್ಲಿಯ ಬಾದಾಮಿನಗರದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರ ನಿವಾಸಕ್ಕೆ ಶನಿವಾರ ಕೇಂದ್ರ ಸಚಿವ ಪ್ರಲ್ಹಾದ್  ಜೋಶಿ ದಿಢೀರ್ ಭೇಟಿ ಮನೆಯೊಳಗೆ ಗೌಪ್ಯ ಸಭೆ ನಡೆಸಿದ್ದಾರೆ.
ವಿಧಾನ‌ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ ಹಾಗೂ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಸಹ ಸಭೆಯಲ್ಲಿ ಭಾಗವಹಿಸಿದ್ದಾರೆ.

ಇನ್ನೂ ಜಗದೀಶ ಶೆಟ್ಟರ ನಿವಾಸದ ಮುಂದೆ ನೂರಾರು ಜನ ಅಭಿಮಾನಿಗಳು ಸೇರಿ ಅವರಿಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದರು. ಬೇಕೆ ಬೇಕು ಶೆಟ್ಟರ ಬೇಕು, ಮಾಜಿ ಮುಖ್ಯ ಮಂತ್ರಿ ಜಗದೀಶ ಶೆಟ್ಟರಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದರು. ಅವರ ಭಾವ ಚಿತ್ರ ಪ್ರದರ್ಶಿಸಿದರು. ಮನೆಯೊಳಗಡೆ ಸಭೆ ನಡೆದಿದ್ದು,ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಸಚಿವ ಶಂಕರಪಾಟೀಲ ಮುನೇನಕೊಪ್ಪ ಮಾಧ್ಯಮದವರೊಂದಿಗೆ ಮಾತನಾಡಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಒಬ್ಬರು ಸರಳ, ಸಜ್ಜನ ನಾಯಕರಾಗಿದ್ದಾರೆ. ಕಳೆದ 30 ವರ್ಷಗಳಿಂದ ಉತ್ತರ ಕರ್ನಾಟಕ ಭಾಗದಲ್ಲಿ ತಳಮಟ್ಟದಿಂದ ಪಕ್ಷ ಕಟ್ಟಿದ್ದಾರೆ. ಪಕ್ಷದಲ್ಲಿ ಯಾವುದೇ ಒಂದು ಕಪ್ಪು ಚುಕ್ಕೆ ಇಲ್ಲದೇ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಕೇಂದ್ರದ ವರಿಷ್ಠರು ಒಂದು ನಿರ್ಣಯ ತೆಗೆದುಕೊಳ್ಳತ್ತಾರೆಂಬ ವಿಶ್ವಾಸವಿದೆ. ಶೆಟ್ಟರ್ ಮತ್ತು ಬಿಜೆಪಿ ಯಾವತ್ತೂ ಒಂದಾಗಿ ಇರುತ್ತದೆ. ಅವರು ಬಂಡಾಯವಾಗಿ ನಿಲ್ಲೋದು ಅಸಾಧ್ಯವಾದ ಮಾತು. ಯಾವತ್ತೂ ಪಕ್ಷದ ಜೊತೆಗೆ ಇರಲಿದ್ದಾರೆ. ಶೆಟ್ಟರ್ ಅವರಿಗೆ ಟಿಕೆಟ್ ತಪ್ಪಲು ಯಾರು ಕಾರಣ ಎಂಬ ಮಾಧ್ಯಮದವರ ಪ್ರಶ್ನೆಗೆ, ಅದು ನನಗೆ ಗೊತ್ತಿಲ್ಲ. ಕೇಂದ್ರದ ವರಿಷ್ಠರು ಉತ್ತರ ನಿರ್ಧಾರ ತೆಗೆದುಕೊಳ್ಳತ್ತಾರೆಂಬ ವಿಶ್ವಾಸ ಇದೆ ಎಂದರು.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!