Sunday, August 14, 2022

Latest Posts

ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಅವರ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೇಂದ್ರ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ರಾಜ್ಯ ಸಚಿವ ಪ್ರತಾಪ್ ಚಂದ್ರ ಸಾರಂಗಿ ಅವರ ಕಾರು ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಪರಿಣಾಮ ಸಚಿವರು ಸಣ್ಣ-ಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಒಡಿಶಾದ ಬಾಲಸೋರ್​​ ಜಿಲ್ಲೆಯ ನೀಲಗಿರಿ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ತಕ್ಷಣವೇ ಸಚಿವರನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗಿದೆ.
ಸಾರಂಗಿ ಅವರ ಕಾರು ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಸಚಿವರೊಂದಿಗೆ ಕಾರಿನಲ್ಲಿದ್ದ ಅವರ ಪಿಎ ಹಾಗೂ ಚಾಲಕನಿಗೂ ಗಾಯಗಳಾಗಿವೆ.
ಪ್ರತಾಪ್​ ಚಂದ್ರ ಸಾರಂಗಿ ಪ್ರಧಾನಿ ಮೋದಿ ಸಂಪುಟದಲ್ಲಿ ಪಶುಸಂಗೋಪನೆ, ಹೈನುಗಾರಿಕೆ, ಮೀನುಗಾರಿಕೆ ಮತ್ತು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಖಾತೆ ಸಚಿವರಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss