Wednesday, August 10, 2022

Latest Posts

ರಾಮನಗರ| ಅಂಗವಿಕಲರಿಗೆ ವಿಶಿಷ್ಟ ಗುರುತಿನ ಚೀಟಿ: ಗಣಕಯಂತ್ರ ಹಸ್ತಾಂತರ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ರಾಮನಗರ:

ಅಂಗವಿಕಲರ ವಿಶಿಷ್ಟ ಗುರುತಿನ ಚೀಟಿ ಯೋಜನೆಯು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಲು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯವರು ಜಿಲ್ಲಾ ಆಸ್ಪತ್ರೆಗಳ ಉಪಯೋಗಕ್ಕಾಗಿ ಗಣಕಯಂತ್ರ ಮತ್ತು ಇತರೆ ಉಪಕರಣಗಳನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ರವರ ಸಮ್ಮುಖದಲ್ಲಿ ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕರಾದ ಡಾ. ಶಶಿಧರ್ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸಿ.ವಿ.ರಾಮನ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಂಗವಿಕಲರ ಕಲ್ಯಾಣಾಧಿಕಾರಿ  ನಾಗವೇಣಿ.ವಿ ಹಾಗೂ ವಿಕಲಚೇತನರ ಮಾಹಿತಿ ಸಲಹಾ ಕೇಂದ್ರದ ಮಾಹಿತಿಸಲಹೆಗಾರ ರಾಜಕುಮಾರ್.ಕೆ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss