ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸೆ.9 ಹಾಗೂ ಸೆ.10ರಂದು ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ತಮ್ಮ ಪತ್ನಿಯೊಂದಿಗೆ ದೆಹಲಿಗೆ ಇಂದು ಆಗಮಿಸಿದ್ದಾರೆ.
ರಿಷಿ ಸುನಕ್ ದಂಪತಿಯನ್ನು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆಯ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಅವರು ಬರಮಾಡಿಕೊಂಡರು.
ನವದೆಹಲಿಯಲ್ಲಿ ನೂತನವಾಗಿ ಉದ್ಘಾಟನೆಗೊಂಡ ಭಾರತ್ ಮಂಟಪದಲ್ಲಿ ಜಿ20 ಶೃಂಗಸಭೆ ನಡೆಯಲಿದೆ.