ಅ.18 ರಿಂದ ಎರಡು ದಿನ ಭಾರತಕ್ಕೆ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಕ್ಟೋಬರ್ 18 ರಿಂದ 20 ರವರೆಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ (ಯುಎನ್‌ಎಸ್‌ಜಿ) ಆಂಟೋನಿಯೊ ಗುಟೆರಸ್ ಅವರು ಭಾರತಕ್ಕೆ ಭೇಟಿ ನೀಡಲಿದ್ದಾರೆ.
ಗುಟೆರಸ್ ಅವರು 2022 ರ ಜನವರಿಯಲ್ಲಿ ಯುಎನ್ ಸೆಕ್ರೆಟರಿ ಜನರಲ್ ಆಗಿ ತಮ್ಮ ಎರಡನೇ ಅವಧಿಯನ್ನು ಪ್ರಾರಂಭಿಸಿದ ನಂತರ ಇದು ಅವರ ಮೊದಲ ಭೇಟಿಯಾಗಿದೆ.ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ.

ಮುಂಬೈನ ತಾಜ್ ಹೋಟೆಲ್‌ ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ಶ್ರದ್ಧಾಂಜಲಿ ಸಲ್ಲಿಸುವುದರೊಂದಿಗೆ ಅವರು ತಮ್ಮ ಭೇಟಿಯನ್ನು ಪ್ರಾರಂಭಿಸುತ್ತಾರೆ. ಪ್ರಧಾನ ಕಾರ್ಯದರ್ಶಿಯವರು ಐಐಟಿ ಮುಂಬೈನಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯವರೊಂದಿಗೆ ಜಾಗತಿಕ ಕಾಳಜಿಯ ವಿಷಯಗಳ ಕುರಿತು ದ್ವಿಪಕ್ಷೀಯ ಚರ್ಚೆ ನಡೆಸಲಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!