ಗಾಜಾದಲ್ಲಿ ಕದನ ವಿರಾಮ ಘೋಷಣೆಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ನಿರ್ಣಯ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ವಿಶ್ವಸಂಸ್ಥೆ ಭದ್ರತಾ ಮಂಡಳಿ ಮಹತ್ವದ ಸಭೆಯಲ್ಲಿ ಇಸ್ರೇಲ್ ಹಾಗೂ ಪ್ಯಾಲೆಸ್ತಿನ್ ನಡುವಿನ ಸಂಘರ್ಷ ಅಂತ್ಯಗೊಳಿಸಲುನಿರ್ಣಯ ಅಂಗೀಕರಿಸಿದೆ. ಈ ಮೂಲಕ ತಕ್ಷಣವೇ ಗಾಜಾದಲ್ಲಿ ಕದನ ವಿರಾಮ ಘೋಷಿಸಬೇಕು ಎಂದು ಭದ್ರತಾ ಮಂಡಳಿಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಇದೇ ಮೊದಲ ಬಾರಿಗೆ ವಿಶ್ವಂಸ್ಥೆ ಭದ್ರತಾ ಮಂಡಳಿ ಕದನ ವಿಮಾನ ಘೋಷಣೆಗೆ ಆಗ್ರಹಿಸಿದೆ. ಭದ್ರತಾ ಮಂಡಳಿಯ ಎಲ್ಲಾ 14 ಸದಸ್ಯರು ಕದನ ವಿಮಾನ ಘೋಷಣೆಗೆ ಮತ ಚಲಾಯಿಸಿದರು.

ಇದೇ ವೇಳೆ ಒತ್ತೆಯಾಳಾಗಿ ಇರಿಸಿಕೊಂಡಿರುವ ನಾಗರೀಕರನ್ನು ಹಮಾಸ್ ತಕ್ಷಣವೇ ಬಿಡುಗಡೆ ಮಾಡಬೇಕು. ಯಾವುದೇ ಷರತ್ತುಗಳಿಲ್ಲದೆ ಒತ್ತೆಯಾಳುಗಳ ಬಿಡುಗಡೆ ಮಾಡಬೇಕು ಎಂದು ವಿಶ್ವಸಂಸ್ಥೆ ಭದ್ರತಾ ಮಂಡಳಿ ನಿರ್ಣಯ ಕೈಗೊಂಡಿದೆ.

ಇತ್ತೀಚೆಗೆ ಹಮಾಸ್ ನಡುವಿನ ಸಂಘರ್ಷ ನಿಲ್ಲಿಸುವಂತೆ ವಿಶ್ವಸಂಸ್ಥೆಯಲ್ಲಿ ಮಂಡಿಸಿದ್ದ ಗೊತ್ತುವಳಿಗೆ ಭಾರತ ಬೆಂಬಲ ವ್ಯಕ್ತಪಡಿಸಿತ್ತು. ಈಜಿಪ್ಟ್‌ ಮಂಡಿಸಿದ ಗೊತ್ತುವಳಿ ಪರವಾಗಿ 153 ದೇಶಗಳು ಒಪ್ಪಿಗೆ ಸೂಚಿಸಿದರೆ ಆಸ್ಟ್ರಿಯಾ, ಇಸ್ರೇಲ್‌ ಹಾಗೂ ಅಮೆರಿಕ ಸೇರಿದಂತೆ 10 ರಾಷ್ಟ್ರಗಳು ವಿರೋಧಿಸಿದವು. 23 ರಾಷ್ಟ್ರಗಳು ಸಭೆಗೆ ಗೈರಾಗಿದ್ದವು.

ಒತ್ತೆಯಾಳುಗಳ ಬಿಡುಗಡೆ ಇಸ್ರೇಲ್ ನವೆಂಬರ್ ತಿಂಗಳಲ್ಲಿ ಕೆಲ ದಿನಗಳ ಕಾಲ ಕದನ ವಿರಾಮ ಘೋಷಿಸಿತ್ತು. ಈ ವೇಳೆ ಇಸ್ರೇಲ್‌ನ 13 ಹಾಗೂ ಥಾಯ್ಲೆಂಡ್‌ನ 11, ಒಬ್ಬರ ಫಿಲಿಪ್ಪೀನಿ ಜನ ಸೇರಿದಂತೆ 24 ಒತ್ತೆಯಾಳುಗಳಯನ್ನು ಹಮಾಸ್ ಉಗ್ರರು ಬಿಡುಗಡೆ ಮಾಡಿದ್ದರು.

ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವೆ ನಡೆಯುತ್ತಿರುವ ಯುದ್ಧದಲ್ಲಿ 7 ವಾರದ ಬಳಿಕ ಇದೇ ಮೊದಲ ಬಾರಿಗೆ ಶುಕ್ರವಾರ ಕದನ ವಿರಾಮ ಜಾರಿಗೆ ಬಂದಿದೆ. 4 ದಿನದ ಕದನವಿರಾಮ ಅಂಗವಾಗಿ ಶುಕ್ರವಾರ ಇಸ್ರೇಲ್‌ನ 13 ಹಾಗೂ ಥಾಯ್ಲೆಂಡ್‌ನ 11, ಒಬ್ಬರ ಫಿಲಿಪ್ಪೀನಿ ಜನ ಸೇರಿದಂತೆ 24 ಒತ್ತೆಯಾಳುಗಳಯನ್ನು ಹಮಾಸ್ ಉಗ್ರರು ಬಿಡುಗಡೆ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಇಸ್ರೇಲ್ ಸೇನಾಪಡೆ 39 ಕೈದಿಗಳನ್ನು ಬಿಡುಗಡೆ ಮಾಡಿತ್ತು. ಒಪ್ಪಂದದ ಅನ್ವಯ ಹಮಾಸ್ ಉಗ್ರರು ಒತ್ತೆಯಾಳುಗಳನ್ನು ರೆಡ್‌ಕ್ರಾಸ್ ಸಂಸ್ಥೆಗೆ ಒಪ್ಪಿಸಿದ್ದರು. ಬಳಿಕ ರೆಡ್‌ಕ್ರಾಸ್‌ನವರು ಗಾಜಾ-ಇಸ್ರೇಲ್ ಗಡಿಯಲ್ಲಿ ಅವರನ್ನು ಇಸ್ರೇಲ್ ವಶಕ್ಕೆ ಒಪ್ಪಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!