ಹೊಸದಿಗಂತ ಡಿಜಿಟಲ್ ಡೆಸ್ಕ್
ಕನ್ನಡ ಚಿತ್ರರಂಗದ ಹಿರಿಯ ನಟ ಕ್ರೇಜಿಸ್ಟಾರ್ ರವಿಚಂದ್ರನ್ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ನೀಡುವುದಾಗಿ ಘೋಷಿಸಿದ್ದು,
ಏ.11ರಂದು ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು.
ರವಿಚಂದ್ರನ್ ಸೇರಿ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲಾಗುವುದು. ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಈ ಸಮಾರಂಭ ನಡೆಯಲಿದ್ದು, ರಾಜ್ಯಪಾಲ ಗೆಹ್ಲೋಟ್ ಅವರು ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ.