ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………
ಹೊಸ ದಿಗಂತ ವರದಿ, ವಿಜಯಪುರ:
ಅಪರಿಚಿತ ವಾಹನ ಹಾಯ್ದು ಪಾದಾಚಾರಿಯೊಬ್ಬ ಸ್ಥಳದಲ್ಲೇ ಸಾವಿಗೀಡಾದ ಘಟನೆ ಜಿಲ್ಲೆಯ ಕೊಲ್ಹಾರ ಪಟ್ಟಣ ಯುಕೆಪಿ ಸಮೀಪದ ಬಸವನಬಾಗೇವಾಡಿ ರಸ್ತೆಯ ಬನ್ನಿಹಳ್ಳ ಬಳಿ ಶುಕ್ರವಾರ ನಡೆದಿದೆ.
ಮೃತಪಟ್ಟವನನ್ನು ಎ. ಜಂಬಗಿ ಗ್ರಾಮದ ರೇವಣಸಿದ್ದಪ್ಪ ಕಾಶಪ್ಪ ಮಸೂತಿ (20) ಎಂದು ಗುರುತಿಸಲಾಗಿದೆ.
ರೇವಣಸಿದ್ದಪ್ಪ ಮಸೂತಿ ಈತನು ಇಲ್ಲಿನ ರಸ್ತೆಯ ಬಳಿ ನಡೆದುಕೊಂಡು ಬರುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿದ್ದು, ತೀವ್ರ ಪೆಟ್ಟಾಗಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾನೆ.
ಈ ಸಂಬಂಧ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.