ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, June 25, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದಲ್ಲಿ ಹಂತಹಂತವಾಗಿ ಅನ್‌ಲಾಕ್: ಹೊಸ ಮಾರ್ಗಸೂಚಿಯಲ್ಲಿ ಏನೇನಿದೆ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕೊರೋನಾ ಸೋಂಕಿನ ಪ್ರಮಾಣದಲ್ಲಿ ಇಳಿಕೆ ಕಾಣದ 11 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಅನ್‌ಲಾಕ್ ಆರಂಭವಾಗಲಿದ್ದು, ಮಾರ್ಗಸೂಚಿ ಪ್ರಕಟವಾಗಿದೆ.
ಕೊರೋನಾ ಸೋಂಕು ನಿಯಂತ್ರಣಕ್ಕೆ ಬಂದಿರುವ ಜಿಲ್ಲೆಗಳಲ್ಲಿ ಜೂ.14ರಿಂದ ಅನ್‌ಲಾಕ್ ಆರಂಭವಾಗಲಿದ್ದು, ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದೆ.

ಹೊಸ ಮಾರ್ಗಸೂಚಿಯಲ್ಲೇನಿದೆ?

  • ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6 ರಿಂದ ಮಧ್ಯಾಹ್ನ2 ರವರೆಗೆ ಅವಕಾಶ.
  • ಮಧ್ಯಾಹ್ನ 2 ಗಂಟೆವರೆಗೆ ಬೀದಿಬದಿ ವ್ಯಾಪಾರಿಗಳಿಗೆ ಮಾರಾಟಕ್ಕೆ ಅವಕಾಶ.
  • ಶೇ.50 ರಷ್ಟು ಸಿಬ್ಬಂದಿ ಬಳಸಿ ಎಲ್ಲಾ ಕಾರ್ಖಾನೆಗಳು ಆರಂಭ.
  • ಗಾರ್ಮೆಂಟ್ಸ್‌ನಲ್ಲಿ ಶೇ.30 ರಷ್ಟು ಸಿಬ್ಬಂದಿಗೆ ಅವಕಾಶ.
  • ಸಿಮೆಂಟ್,ಸ್ಟೀಲ್ ಅಂಗಡಿ ಓಪನ್.
  • ಕಟ್ಟಡ ನಿರ್ಮಾಣ ಕಾಮಗಾರಿಗೆ ಅವಕಾಶ.
  • ಹೋಟೆಲ್‌ಗಳಲ್ಲಿ ಪಾರ್ಸೆಲ್‌ಗೆ ಅವಕಾಶ.
  • ಆಟೋ,ಟ್ಯಾಕ್ಸಿಯಲ್ಲಿ ಇಬ್ಬರು ಪ್ರಯಾಣಿಸಲು ಅವಕಾಶ.
  • ಮದುವೆಗಳಲ್ಲಿ 40 ಮಂದಿಗೆ ಭಾಗಿಯಾಗಲು ಅವಕಾಶ.
  • ಅಂತ್ಯಕ್ರಿಯೆಯಲ್ಲಿ 5 ಮಂದಿ ಭಾಗವಹಿಸಲು ಅವಕಾಶ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss