ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿಕೆ ಶಿವಕುಮಾರ್ ಅವರನ್ನು ಕಾಪಾಡುವ ದೇವರು ಇದ್ದಂತೆ ನಮಗೂ ದೇವರಿದ್ದಾನೆ. ನಾನು ರಾಜರಾಜೇಶ್ವರ ದೇವಸ್ಥಾನಕ್ಕೆ ಹೋಗಿದ್ದೆ. ರಾಜರಾಜೇಶ್ವರ ದೇವರಿಗೇ ಇದನ್ನ ಬಿಡ್ತೀನಿ, ರಾಜರಾಜೇಶ್ವರ ದೇವರೆ ಅವರಿಗೆ ಶಿಕ್ಷೆ ಕೊಡಲಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ನಗರದ ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ದ.ಕ. ‘ಆಚಾರವಿಲ್ಲದ ನಾಲಿಗೆ, ನಿನ್ನ ನೀಚ ಬುದ್ದಿ ಬಿಡು ನಾಲಿಗೆ” ಎಂಬ ಪುರಂದರ ದಾಸರ ಕೀರ್ತನೆಯ ಮೂಲಕ ಡಿಕೆಶಿ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಡಿಸಿಎಂ ಆಗಿದ್ದರೂ ಅವರಿಗೆ ಈ ಸ್ಥಾನದ ಗೌರವ, ಬೆಲೆ ಅರ್ಥವಾಗುತ್ತಿಲ್ಲ. ಅವರು ನಮ್ಮ ಕುಟುಂಬವನ್ನು ಸರ್ವನಾಶ ಮಾಡಲು ಶ್ರಮಿಸುತ್ತಾರೆ. ನಮ್ಮ ಕುಟುಂಬದಲ್ಲಿ ನನಗೆ ತಿಳಿವಳಿಕೆ ಬಂದಾಗಿನಿಂದ ಕುರಿ, ಕೋಣ, ಮೇಕೆ ಕಡಿಯೋದು ಯಾವತ್ತೂ ಮಾಡಿಲ್ಲ. ನಾವು ದೇವರ ಪೂಜೆ ಮಾಡ್ತೀವಿ. ಹಿಂದೂ ಸಂಸ್ಕೃತಿಯಲ್ಲಿ ಇರೋ ಧಾರ್ಮಿಕವಾಗಿ ನಾವು ಪೂಜೆ ಮಾಡ್ತೀವಿ. ಯಾಗ ಮಾಡೋದು ಡಿಕೆಶಿ ಸಂಸ್ಕೃತಿ ಎಂದು ವಾಗ್ದಾಳಿ ನಡೆಸಿದ್ದಾರೆ.
Nim Anna na magane saku vicharakke exp
Nim Anna na magane saku acchar vicharakke exp