ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್‌: ಸೂರಜ್ ರೇವಣ್ಣ 8 ದಿನ ಸಿಐಡಿ ಕಸ್ಟಡಿಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಬಂಧನಕ್ಕೆ ಒಳಗಾದ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣನನ್ನು ಕೋರ್ಟ್‌ 8 ದಿನ ಸಿಐಡಿ ಕಸ್ಟಡಿಗೆ ನೀಡಿದೆ.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಸರ್ಕಾರ ಸಿಐಡಿಗೆ (CID) ವಹಿಸಿ ಭಾನುವಾರ ಆದೇಶಿಸಿತ್ತು. ಭಾನುವಾರ 42ನೇ ಎಸಿಎಂಎಂ ಕೋರ್ಟ್‌ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಇಂದು ಸೂರಜ್‌ ರೇವಣ್ಣ ಅವರನ್ನು ಪೊಲೀಸರು ಕೋರ್ಟ್‌ಗೆ ಹಾಜರು ಪಡಿಸಿದರು. ವಿಚಾರಣೆ ವೇಳೆ ಸರ್ಕಾರಿ ವಕೀಲರು 14 ದಿನ ಪೊಲೀಸ್‌ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಆದರೆ ನ್ಯಾಯಾಧೀಶರು 8 ದಿನ ಪೊಲೀಸ್‌ ಕಸ್ಟಡಿಗೆ ನೀಡಿದರು. ಜುಲೈ 1 ಸಂಜೆ 4 ಗಂಟೆಗೆ ಸೂರಜ್‌ ರೇವಣ್ಣ ಅವರನ್ನು ಕೋರ್ಟ್‌ಗೆ ಹಾಜರುಪಡಿಸುವಂತೆ ನ್ಯಾಯಾಧೀಶರು ಸಿಐಡಿ ಪೊಲೀಸರಿಗೆ ಸೂಚಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!