ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಎಲ್ ಸಿ ಸೂರಜ್ ರೇವಣ್ಣ ನನ್ನು 2 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಸೂರಜ್ ರೇವಣ್ಣ ಸಿಐಡಿ ಕಸ್ಟಡಿ ಜುಲೈ 1ಕ್ಕೆ ಇಂದು ಅಂತ್ಯವಾಗಿದ್ದು, ಈ ಹಿನ್ನೆಲೆ ಬೆಂಗಳೂರಿನ 42 ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಮತ್ತೆ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದರು.
ಯುವಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರು ಜೂನ್ 22ರಂದು ಸೂರಜ್ ರೇವಣ್ಣ ಅವರನ್ನು ಬಂಧಿಸಿದ್ದರು. ನಂತರ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿತ್ತು. ಜೂನ್ 23ರಂದು ಸಿಐಡಿ ಪೊಲೀಸರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಎದುರು ಸೂರಜ್ ರೇವಣ್ಣನನ್ನು ಹಾಜರುಪಡಿಸಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದಾರೆ.