Saturday, August 13, 2022

Latest Posts

ವಿವಿಧ ಇಲಾಖೆಯಲ್ಲಿನ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವುದೇ ನಮ್ಮ ಮೊದಲ ಗುರಿ: ಸಚಿವ ಕೋಟ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ಆನ್ ಲೈನ್ ಡೆಸ್ಕ್

ರಾಜ್ಯದ ವಿವಿಧ ಇಲಾಖೆಯಲ್ಲಿನ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವುದೇ ನಮ್ಮ ಮೊದಲ ಗುರಿ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ಮಂಗಳವಾರ ಪಕ್ಷದ ಕಚೇರಿಗೆ ಬಂದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಪ್ರತೀ ದಿನ ಕಾರ್ಯಾಲಯಕ್ಕೆ ಬಂದು ಅಹವಾಲು ಸ್ವೀಕಾರಕ್ಕೆ ಸೂಚನೆ ನೀಡಿದ್ದೇವೆ ಎಂದರು.
ಸಮಾಜ ಕಲ್ಯಾಣ ಇಲಾಖೆಯಲ್ಲಿ 1.20 ಕೋಟಿ‌ ಕುಟುಂಬ ಇದೆ. ಅವರಿಗೆ ಶೌಚಾಲಯ, ಹಕ್ಕು ಪತ್ರ, ಶಿಕ್ಷಣ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಜವಾಬ್ದಾರಿ. ಅಸ್ಪೃಶ್ಯತೆ ಕಡಿವಾಣ ಹಾಕುವುದು ನನ್ನ ಗುರಿ. ಆರ್ಥಿಕ ಕಾರಣದಿಂದ ಕೆಲ ಕಾಲ ಹಣ ಬಿಡುಗಡೆಗೆ ಸಮಸ್ಯೆ ಆಗಿದೆ. ಈ ಬಗ್ಗೆ ಸಿಎಂ ಸಭೆ ಮಾಡಿ ವಿಶ್ವಾಸ ಮೂಡಿಸಿದ್ದಾರೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss