Friday, July 1, 2022

Latest Posts

ಪರವಾನಿಗೆ ಇಲ್ಲದೆ ಅನಧಿಕೃತ ಮಾರಾಟ ಮಾಡುತ್ತಿದ್ದ ಕೀಟನಾಶಕಗಳ ವಶ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸ ದಿಗಂತ ವರದಿ, ಜಮಖಂಡಿ :

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕುಂಚನೂರು ಗ್ರಾಮದ ಜೈಕಿಸಾನ ಸೇವಾ ಕೇಂದ್ರದಲ್ಲಿ ಅನಧಿಕೃತವಾಗಿ ಯಾವುದೇ ಪರವಾನಿಗೆ ಇಲ್ಲದೇ ಕೀಟನಾಶಕ ಮಾರಾಟ ಮಾಡುತ್ತಿದ್ದರ ಹಿನ್ನೆಲೆಯಲ್ಲಿ ಕೃಷಿ ಇಲಾಖೆ ಇಲಾಖೆಯ ಜಾರಿದಳದವರು ದಾಳಿ ನಡೆಸಿದ್ದಾರೆ.
ಸಹಾಯಕ ಕೃಷಿ ನಿರ್ದೇಶಕ ಬಸವರಾಜ ಮಾಳೇದ ಹಠಾತ ದಾಳಿ ನಡೆಸಿ ಅನಧಿಕೃತವಾಗಿ ಪರವಾನಿಗೆ ಇಲ್ದೇ ಮಾರಾಟ ಮಾಡುತ್ತಿದ್ದ 41.57 ಪ್ರಮಾಣದ ಒಟ್ಟು 118633 ರೂ ಮೌಲ್ಯದ ದ್ರವ ಮತ್ತು ಪೌಡರ ರೂಪದ ಕೀಟ ನಾಶಕಗಳು ವಶಪಡಿಸಿಕೊಂಡಿದ್ದಾರೆ. ಮುಂದಿನ ಕ್ರಮಕ್ಕಾಗಿ ನ್ಯಾಯಾಲಯ ಸುಪರ್ದಿಗೆ ನೀಡುತ್ತೇವೆ ಕಾರ್ಯಾಚರಣೆಯಲ್ಲಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಮ್.ಎಸ್.ಬುಜರುಕ, ಕೃಷಿ ಅಧಿಕಾರಿ ರಮೇಶ ಪಡಸಲಗಿ ಇದ್ದರು.  ಜಾರಿ ದಳದ ಸಹಾಯಕ ನಿರ್ದೇಶಕ ಬಸವರಾಜ
ಮಾಳೇದ ತಿಳಿಸಿದ್ದಾರೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss