ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………
ಹೊಸ ದಿಗಂತ ವರದಿ, ಕೋಲಾರ:
ಕೊರೋನಾದಿಂದ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿರುವ ಅಸಂಘಟಿತ ಕಾರ್ಮಿಕರಿಗೆ ರಾಜ್ಯ ಸರಕಾರ ಘೋಷಣೆ ಮಾಡಿರುವ 2 ಸಾವಿರ
ರೂ. ಪರಿಹಾರ ಒದಗಿಸುವ ಯೋಜನೆಯಡಿಯಲ್ಲಿ ಅರ್ಹರಿಗೆ ಸಹಾಯಧನ ಒದಗಿಸಲು ಅಗತ್ಯ ಮಾರ್ಗದರ್ಶನ ನೀಡುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅಧಿಕಾರಿಗಳಿಗೆ ಸೂಚಿಸಿದರು.
ಅಸಂಘಟಿತ ಕಾರ್ಮಿಕರಿಗೆ ಸಹಾಯಧನ ಒದಗಿಸುವ ಕುರಿತಂತೆ ಬುಧವಾರ ಸಂಬಂಧಪಟ್ಟ ಅಧಿಕಾರಿಗಳ ಆನ್ಲೈನ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಅಸಂಘಟಿತ ಕಾರ್ಮಿಕ ವೃತ್ತಿಯಲ್ಲಿ ತೊಡಗಿರುವವರು ಸಹಾಯಧನಕ್ಕಾಗಿ ಸೇವಾಸಿಂಧು ವೆಬ್ಸೈಟ್ ಮೂಲಕ ದಾಖಲೆಗಳನ್ನು ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಎಂದರು.
ಸೇವಾ ಕೇಂದ್ರಗಳಲ್ಲಿ ಅರ್ಜಿಯನ್ನು ಸಲ್ಲಿಸಲು ಬಂದ ಕಾರ್ಮಿಕರಿಗೆ ಅಗತ್ಯ ನೆರವು ನೀಡುವ ಜೊತೆಗೆ ಯೋಜನೆಯ ಬಗ್ಗೆ ಅರಿವು ಮೂಡಿಸಬೇಕು ಮಾಹಿತಿಯ ಕೊರತೆಯಿಂದ ಅರ್ಹ ಪಲಾನುಭವಿಗಳು ಯೋಜನೆಯಿಂದ ದೂರ ಉಳಿದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಪಲಾನುಭವಿಗಳು ಆಧಾರ್ ಸಂಖ್ಯೆ ಲಿಂಕ್ ಆಗಿರುವ ಬ್ಯಾಂಕ್ ಖಾತೆ ಸೇರಿದಂತೆ ವೃತ್ತಿ ನಿರ್ವಹಿಸುತ್ತಿರುವ ಕುರಿತು ಅಧಿಕಾರಿಗಳಿಂದ ಪಡೆದ ಉದ್ಯೋಗ ದೃಢೀಕರಣ ಪ್ರಮಾಣ ಪತ್ರದೊಂದಿಗೆ ಅರ್ಜಿ ಸಲ್ಲಿಸಬೇಕು ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಮಾಹಿತಿ ಭರ್ತಿ ಮಾಡಬೇಕು. ಆಧಾರ್ ಕಾರ್ಡ್, ವಿಳಾಸ ದೃಢೀಕರಣ ಪತ್ರದ ಅಧಿಕೃತ ದಾಖಲೆ ಅಪ್ ಲೋಡ್ ಮಾಡಬೇಕು. ಮೊಬೈಲ್ ಸಂಖ್ಯೆ ನಮೂದಿಸಬೇಕು. ಜನ್ಮ ದಿನಾಂಕ ನಮೂದಿಸಿದ ಪ್ರಮಾಣ ಪತ್ರ, ಬಿಪಿಎಲ್ ಸಂಖ್ಯೆ, ಪಾಸ್ ಪೋರ್ಟ್ ಅಳತೆ ಭಾವಚಿತ್ರ ಅಪ್ಲೋಡ್ ಮಾಡಬೇಕು. ಬ್ಯಾಂಕ್ ಖಾತೆಯ ವಿವರ, ಸ್ವಯಂ ಘೋಷಣೆ ಸಲ್ಲಿಸಬೇಕು. ಅರ್ಜಿದಾರರ ವೃತ್ತಿಯ ಕುರಿತಾದ ಉದ್ಯೋಗ ಪ್ರಮಾಣ ಪತ್ರವನ್ನು ಕಂದಾಯ ಅಧಿಕಾರಿಗಳು, ನಿರೀಕ್ಷಕರು, ಕಾರ್ಮಿಕ ಇಲಾಖೆ ಅಧಿಕಾರಿಗಳು, ಯಾವುದೇ ಸಂಬಂಧಿಸಿದ ಅಧಿಕಾರಿಗಳಿಂದ ದೃಢೀಕರಿಸಿ ಮೂಲ ಪ್ರತಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿಕೊಳ್ಳಬೇಕು ಎಂದರು
ಕೊರೊನಾ ಎರಡನೇ ಅಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಸಾವು ನೋವುಗಳಾಗಿವೆ ಕೊರೊನಾ ನಿಯಂತ್ರಣಕ್ಕೆ ಎಲ್ಲರ ಸರಕಾರ ಮುಖ್ಯವಾಗಿದೆ ಲಸಿಕೆ ಹಾಕಿಸಿಕೊಳ್ಳದವರಿಗೆ ಲಸಿಕೆಯ ಬಗ್ಗೆ ಅರಿವು ಮಾಡಿಸಬೇಕು ಜೊತೆಗೆ ಸರಕಾರದ ಕೋವಿಡ್ ನಿಯಮಗಳ ಪ್ರಕಾರ ಅರ್ಜಿಗಳನ್ನು ಸ್ವೀಕರಿಸಬೇಕು ಈ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವ ಮೂಲಕ ಮಾದರಿ ಜಿಲ್ಲೆಯಾಗುವಂತೆ ಅಧಿಕಾರಿಗಳು ಕೆಲಸ ಮಾಡಬೇಕು ಎಂದರು.
ಆನ್ಲೈನ್ ಸಭೆಯಲ್ಲಿ ಪೌರಾಯುಕ್ತರು
ಸಭೆಯ ನಂತರ ನಗರಸಭೆ ಆಯುಕ್ತ ಶ್ರೀಕಾಂತ್ ಮಾತನಾಡಿ, ಅಸಂಘಟಿತ ಕಾರ್ಮಿಕರಿಗೆ ಸಂಬಂಧಿಸಿದಂತೆ ಅನುಕೂಲವಾಗುವಂತೆ ನಗರಸಭೆ ಕಂದಾಯ ನಿರೀಕ್ಷಿಕ ಚಂದ್ರು ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದ್ದು ಬೆಳಗ್ಗೆ 8 ಗಂಟೆಯಿಂದ ಸಂಜೆ 6 ರವರೆಗೆ ನೇರವಾಗಿ ಸಂಪರ್ಕ ಮಾಡಬಹುದು ಅರ್ಹ ಪಲಾನುಭವಿಗಳಿಗೆ ಈ ಯೋಜನೆಯಿಂದ ಅನುಕೂಲವಾಗುವಂತೆ ಅಧಿಕಾರಿಗಳು ಮುಂದಾಗುತ್ತಾರೆ ಎಂದರು.