ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಹಿಂದೆ ನಡೆದಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಆ ಅವಧಿಯಲ್ಲಿ ಇದ್ದ ಪೊಲೀಸ್ ಕಮಿಷನರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧ ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಒತ್ತಾಯಿಸಿದ್ದಾರೆ.
ಮಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕುರಿತಂತೆ ಗೃಹ ಸಚಿವರಿಗೆ ಪತ್ರ ಬರೆದು ಒತ್ತಾಯ ಮಾಡುವುದಾಗಿ ತಿಳಿಸಿದ್ದಾರೆ. ಯಾರಿಗೂ ಯಾರನ್ನೂ ಕೊಲ್ಲುವ, ಹಲ್ಲೆ ಮಾಡುವ ಅಧಿಕಾರ ಇಲ್ಲ. ಇದನ್ನು ಎಲ್ಲರೂ ಖಂಡಿಸಬೇಕು ಎಂದು ಹೇಳಿದ್ದಾರೆ.