October 9, 2026
Friday, October 9, 2026
spot_img

ಬಳ್ಳಾರಿ ಚಲೋ ಬಿಜೆಪಿ ಪಾದಯಾತ್ರೆಗೆ ಅಭೂತಪೂರ್ವ ಬೆಂಬಲ : ಇಂದು ಕಂಪ್ಲಿ ಕ್ಷೇತ್ರದಿಂದ ನಡಿಗೆ ಆರಂಭ

ಹೊಸದಿಗಂತ ವರದಿ ಬಳ್ಳಾರಿ:

ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ, ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದ 187 ಕೋಟಿ ನಿಗಮಕ್ಕೆ ವಾಪಸ್ಸಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಬಿಜೆಪಿ ಪಾದಯಾತ್ರೆಗೆ ಅಭೂತಪೂರ್ವ ಬೆಂಬಲ ದೊರೆತಿದ್ದು, ಕಂಪ್ಲಿ ಪಟ್ಟಣದ ಅಂಬೇಡ್ಕರ್ ಸರ್ಕಲ್ ನಿಂದ ಸೋಮವಾರ ಬೆಳಿಗ್ಗೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ಮುಖ್ಯ ಸಚೇತಕ ದೊಡ್ಡನಗೌಡ ಹೆಚ್. ಪಾಟೀಲ್, ಮಾಜಿ ಸಚಿವರಾದ ಬಿ.ಶ್ರೀರಾಮುಲು, ಸಿ.ಟಿ.ರವಿ, ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಮಾಜಿ ಸಚಿವರು ಮತ್ತು ಶಾಸಕರಾದ ಗಾಲಿ ಜನಾರ್ಧನ ರೆಡ್ಡಿ,ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ, ಶಾಸಕ ಬಾಲಚಂದ್ರ ಜಾರಕಿಹೋಳಿ, ಸಿದ್ದು ಪಾಟೀಲ್, ವಿಧಾನಪರಿಷತ್ ಸದಸ್ಯರಾದ ಹೇಮಲತಾ ನಾಯ್ಕ್, ವೈ.ಎಂ. ಸತೀಶ್, ರಘು ಕೌಟಿಲ್ಯ, ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜುಗೌಡ ನಾಯಕ, ರಾಜ್ಯ ಕಾರ್ಯದರ್ಶಿಗಳಾದ ಶರಣು ತಳ್ಳಿಕೇರಿ, ಕೆ.ಎಸ್. ದಿವಾಕರ್, ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು, ಎಸ್.ಟಿ. ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು, ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕಾ, ಸಚಿವರಾದ ಶಿವನಗೌಡ ನಾಯಕ, ಮಾಜಿ ಶಾಸಕರಾದ ಸೋಮಶೇಖರ್ ರೆಡ್ಡಿ, ಬಸವರಾಜ್ ದಡೆಸೂಗೂರು, ಹಾಲಪ್ಪ ಆಚಾರ, ಕಂಪ್ಲಿ ಸುರೇಶ ಬಾಬು, ಮುಖಂಡರಾದ ಅರುಣಾ ಜನಾರ್ಧನ ರೆಡ್ಡಿ, ಡಾ. ಬಸವರಾಜ್ ಕ್ಯಾವಟರ್, ಸೇರಿದಂತೆ ಸಾವಿರಾರು ಕಾರ್ಯಕರ್ತರು, ಸ್ಥಳೀಯ ಮುಖಂಡರು ನಾಯಕರೊಂದಿಗೆ ಹೆಜ್ಜೆ ಹಾಕಿದರು.

Must Read