Thursday, March 23, 2023

Latest Posts

ವಿಜಯ ಸಂಕಲ್ಪ ಯಾತ್ರೆಗೆ ರಾಜ್ಯದಲ್ಲಿ ಅಭೂತಪೂರ್ವ ಬೆಂಬಲ: ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್

ಹೊಸದಿಗಂತ ವರದಿ, ವಿಜಯಪುರ:

ವಿಜಯ ಸಂಕಲ್ಪ ಯಾತ್ರೆಗೆ ರಾಜ್ಯದಲ್ಲಿ ಅಭೂತಪೂರ್ವ ಬೆಂಬಲ ದೊರೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ್ ಹೇಳಿದರು.

ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಹೋದ ಕಡೆಗಳೆಲ್ಲೆಲ್ಲ ಜನರು ಉತ್ತಮವಾಗಿ ಸ್ಪಂದನೆ ನೀಡುತ್ತಿದ್ದಾರೆ ಎಂದರು.

ಮಂಡ್ಯದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮ ನಿರೀಕ್ಷಿಗೇ ಮೀರಿ ಬೆಂಬಲ ದೊರಕಿದೆ. ಮಂಡ್ಯ ಭಾಗದಿಂದ ಕಾಂಗ್ರೆಸ್, ಜೆಡಿಎಸ್ ನಾಯಕರು ಬಿಜೆಪಿಗೆ ಬರಲಿದ್ದಾರೆ. ಪ್ರಧಾನಿ ಮೋದಿಗೆ ಮಂಡ್ಯದಲ್ಲಿ ಉತ್ತಮವಾದ ಬೆಂಬಲ ನೀಡಿದ್ದಾರೆ. ಕಾಂಗ್ರೆಸ್ ನಾಯಕರ ಸುಳ್ಳು ಭರವಸೆ ಜನರಿಗೆ ತಿಳಿದಿದೆ. ಬಿಜೆಪಿ ಪರವಾಗಿ ರಾಜ್ಯದಲ್ಲಿ ಜನ ಬೆಂಬಲ ಇದೆ ಎಂದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮಾತನಾಡಿ, ಕಾಂಗ್ರೆಸ್ ನಲ್ಲಿ ನಾಯಕತ್ವ ಡಿಎನ್ಎ ಮೂಲಕ ಬರುತ್ತದೆ. ಜೆಡಿಎಸ್ ನಲ್ಲೂ ಕುಟುಂಬದ ಆಧಾರದ ಮೇಲೆ ನಾಯಕತ್ವ ಬರುತ್ತದೆ. ಆದರೆ ಬಿಜೆಪಿಯಲ್ಲಿ ಅದು ಸಾಧ್ಯವಿಲ್ಲ. ನಮ್ಮ ಪಕ್ಷದಲ್ಲಿ ಕಾರ್ಯಕರ್ತರ ಮೂಲಕ ನಮ್ಮಲ್ಲಿ ನಾಯಕರು ಬರುತ್ತಾರೆ. ಸಂವಿಧಾನದ ಅನುಗುಣವಾಗಿ ನಾವು ಮೀಸಲಾತಿ ನೀಡಿದೇವು ಎಂದರು.

ಬಿಜೆಪಿ ಸರ್ಕಾರದಲ್ಲಿ ನೀರಾವರಿ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಮಾಡಲಾಗಿದೆ ಎಂದು ಶಾಸಕ ಎಂ.ಬಿ. ಪಾಟೀಲ್ ವಿರುದ್ಧ ವಾಗ್ದಾಳಿ ಮಾಡಿದರು.

ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಸೇರಿದಂತೆ ಹಲವು ನಾಯಕರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!