ಜನಸಂಕಲ್ಪ ಯಾತ್ರೆಗೆ ಜನತೆಯ ಅಭೂತಪೂರ್ವ ಬೆಂಬಲ : ಸಿಎಂ ಬೊಮ್ಮಾಯಿ

ಹೊಸದಿಗಂತ ವರದಿ ಹಾವೇರಿ :

ರಾಜ್ಯಾದ್ಯಂತ ಜನ ಸಂಕಲ್ಪ ಯಾತ್ರೆಯಲ್ಲಿ ಜನತೆಯ ಅಭೂತಪೂರ್ವ ಬೆಂಬಲ ದೊರೆಯುತ್ತಿದೆ. ಜನರ ಉತ್ಸಾಹ ಇಮ್ಮಡಿಯಾಗಿದೆ,ಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ತರೋ ಸಂಕಲ್ಪ ಜನ ಮಾಡಿದ್ದಾರೆ, ಸ್ಪಷ್ಟ ಸಂದೇಶ ದೊರೆತಂತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರ ಗ್ರಾಮದ ಹೆಲಿಪ್ಯಾಡನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಸಿದ್ದರಾಮಯ್ಯ ಹೇಳಿದ್ದು ಯಾವುದಾದರು ನೆರವೇರಿದೆಯೆ. ಅವರ ಹೇಳಿಕೆಗೆ ಮಹತ್ವ ಕೊಡುವ ಅವಶ್ಯಕತೆ ಇಲ್ಲ ಎಂದು ಬಿಜೆಪಿಯನ್ನು ಮನೆಗೆ ಕಳಿಸುವ ಸಂಕಲ್ಪ ಜನ ಮಾಡಿದ್ದಾರೆ ಎಂಬ ಸಿದ್ದರಾಮಯ್ಯ ಟೀಕೆಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

ಅವರಪ್ಪನಾಣೆಗೂ ಬಿ.ಎಸ್.ಯಡಿಯೂರಪ್ಪ ಅವರು, ಹೆಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಆಗಲ್ಲ ಅಂದಿದ್ದರು. ಮತ್ತೆ ನಾನೇ ಸಿಎಂ ಅಂದಿದ್ದರು ಆದರೆ ಸಿಎಂ ಆದರಾ. ಅವರು ಹೇಳಿದುದರಲ್ಲಿ ಯಾವುದಾದರೂ ಒಂದಾದರೂ ಆಗಿದೆಯಾ ಹೀಗಾಗಿ ಅವರ ಮಾತಿಗೆ ಮಹತ್ವ ಕೊಡಬೇಕಾಗಿಲ್ಲ.ಅವರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳಲ್ಲ ನೀವೂ ತಲೆ ಕೆಡಿಸಿಕೊಳ್ಳಬೇಡಿ ಎಂದು ಹೇಳಿದರು.

ಸಿದ್ದರಾಮಯ್ಯ ಅವರು ಹಿಂದೆ ಜನಾಶೀರ್ವಾದ ಯಾತ್ರೆ ಮಾಡಿದರು. ಆದರೆ ಜನ ಅವರಿಗೆ ಆಶೀರ್ವಾದ ಮಾಡಲಿಲ್ಲ. ಅವರ ದುರಾಡಳಿತದಿಂದ ಜನ ಅವರನ್ನು ತಿರಸ್ಕಾರ ಮಾಡಿದರು ಎಂದರು.
ಹಿಂದೂ ಪದದ ಬಗ್ಗೆ ಸತೀಶ್ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡದ ಸಿಎಂ ಇದು ಕೊಳಕು ಮನಸ್ಸಿನ ಮನಸ್ಥಿತಿ. ಒಂದು ಸಮಗ್ರವಾಗಿ ಇರುವ ಪರಂಪರೆ ಬಗ್ಗೆ ಪದೇ ಪದೇ ಕೆಣಕುವುದು, ಅವಮಾನ ಅಪಮಾನ ಮಾಡೋದು ಎಷ್ಟು ಸರಿ. ಅವರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳಲ್ಲ ನೀವೂ ತಲೆ ಕೆಡಿಸಿಕೊಳ್ಳಬೇಡಿ ಎಂದರು.

ಅವರ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆ ಮಾಡ್ತಿದ್ದಾರೆ. ಆದರೆ ಇಲ್ಲಿ ಇಂಥ ಹೇಳಿಕೆ ಕೊಟ್ಟು ಇವರು ಭಾರತ್ ತೋಡೊ ಮಾಡ್ತಿದ್ದಾರೆ. ಇವರ ಹೇಳಿಕೆಯಿಂದ ಎಷ್ಟೊಂದು ಜನಕ್ಕೆ ನೋವಾಗಿದೆ ಎಂದು ತಿಳಿಸಿದರು. ಇದು ಭಾರತ ಒಡೆಯುವ ಸಂಚಿನ ಮನಸ್ಥಿತಿ. ಅವರ ಆಡಳಿತ, ಅವರ ನೀತಿಯಿಂದಲೇ ದೇಶಕ್ಕೆ ಆಂತರಿಕ ದಕ್ಕೆ ಬಂದಿದೆ. ಅರಾಜಕತೆ ಹುಟ್ಟಿಸಿ ಅಧಿಕಾರಕ್ಕೆ ಬರುವ ಮನಸ್ಥಿತಿ ಇವರದ್ದು.

ಸತೀಶ ಜಾರಕಿಹೊಳೆ ಹೇಳಿಕೆ ಕುರಿತು ಯಾಕೆ ಸಿದ್ದರಾಮಯ್ಯ ಇನ್ನೂ ಮಾತಾಡುತ್ತಿಲ್ಲ‌ ಇದಕ್ಕೆ ರಾಹುಲ್ ಗಾಂಧಿ ಅವರ ಅಭಿಪ್ರಾಯ ಏನು?. ಕಾರ್ಯಾದ್ಯಕ್ಷರ ಹೇಳಿಕೆಗೆ ಕ್ರಮ ಜರುಗಿಸುತ್ತಾರಾ?. ಕಾಂಗ್ರೆಸ್ ಹೈಕಮಾಂಡ್ ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರಶ್ನೆ ಮಾಡಿದರು.

ಈಗಾಗಲೇ ರಾಜ್ಯದಲ್ಲಿ ಹಲವೆಡೆ ಜನ ಸಂಕಲ್ಪ ಸಮಾವೇಶ ಮಾಡಿದ್ದೇವೆ, ಇದು ಹಾವೇರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಪ್ರಥಮ ಜನ ಸಂಕಲ್ಪ ಸಭೆ. ಪ್ರತಿಯೊಬ್ಬ ಫಲಾನುಭವಿಗೆ ನಮ್ಮ ಸರ್ಕಾರಗಳ ಕಾರ್ಯಕ್ರಮ ಮುಟ್ಟಿಸುತ್ತಿದ್ದೇವೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!