ಅವಾಸ್ತವಿಕ ಭರವಸೆ ಈಡೇರಿಸುವುದು ಸುಲಭ, ಸಮರ್ಪಕ ಜಾರಿ ಕಷ್ಟ: ಕಾಂಗ್ರೆಸ್‌ ಗ್ಯಾರಂಟಿ ವಿರುದ್ಧ ಮೋದಿ ಚಾಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಅವಾಸ್ತವಿಕ ಭರವಸೆಗಳನ್ನು ಈಡೇರಿಸುವುದು ಸುಲಭ. ಆದರೆ, ಅವುಗಳನ್ನು ಸಮರ್ಪಕವಾಗಿ ಜಾರಿಗೊಳಿಸುವುದು ತುಂಬಾ ಕಷ್ಟ ಎಂದು ಪ್ರಧಾನಿ ಮೋದಿ ಕಿಡಿಕಾರಿದ್ದಾರೆ.

ಗ್ಯಾರಂಟಿ ಯೋಜನೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್​ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಲಹೆ ವಿಚಾರವಾಗಿ ಮೋದಿ ಕಿಡಿಕಾರಿದ್ದಾರೆ.

ಶಕ್ತಿ ಯೋಜನೆ ಪರಿಷ್ಕರಣೆ ಬಗ್ಗೆ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಗ್ಯಾರಂಟಿ ಘೋಷಿಸಿಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಲಹೆ ನೀಡಿದ್ದರು. ಖರ್ಗೆ ಸಲಹೆ ಬೆನ್ನಲ್ಲೇ ಕಾಂಗ್ರೆಸ್ ಅನ್ನು ಪ್ರಧಾನಿ ಮೋದಿ ಕುಟುಕಿದ್ದಾರೆ. ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಾಕಿ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ.

ಅವಾಸ್ತವಿಕ ಭರವಸೆಗಳನ್ನು ನೀಡುವುದು ಸುಲಭ. ಆದರೆ, ಅವುಗಳನ್ನು ಸಮರ್ಪಕವಾಗಿ ಜಾರಿಗೊಳಿಸುವುದು ಕಠಿಣ. ಇದು ಅಸಾಧ್ಯ, ಕಠಿಣ ಮಾರ್ಗ ಎಂದು ಕಾಂಗ್ರೆಸ್ ಅರಿತುಕೊಂಡಿದೆ. ಅವರು ಜನರಿಗೆ ಭರವಸೆ ಮಾತ್ರ ನೀಡುತ್ತಾರೆ. ಅದರೆ ಅದನ್ನು ಎಂದಿಗೂ ಪೂರೈಸಲು ಸಾಧ್ಯವಿಲ್ಲ ಎಂದು ಅವರಿಗೆ ತಿಳಿದಿದೆ. ಹಿಮಾಚಲ ಪ್ರದೇಶ, ಕರ್ನಾಟಕ ಮತ್ತು ತೆಲಂಗಾಣದಲ್ಲಿ ಅವರು ಜನರ ಮುಂದೆ ಕೆಟ್ಟದಾಗಿ ನಿಂತಿದ್ದಾರೆ. ಅವರ ಭರವಸೆಗಳು ಈಡೇರಿಲ್ಲ. ಇದು ಈ ರಾಜ್ಯಗಳ ಜನರಿಗೆ ಕಾಂಗ್ರೆಸ್ ಮಾಡಿದ ಭೀಕರ ಮೋಸ ಎಂದು ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಒಳರಾಜಕೀಯದಲ್ಲಿ ನಿರತವಾಗಿದೆ. ಅಭಿವೃದ್ಧಿಯ ಬಗ್ಗೆ ಕಾಳಜಿ ವಹಿಸುವ ಬದಲು ಲೂಟಿ ಮಾಡುತ್ತಿದೆ. ಅಷ್ಟೇ ಅಲ್ಲ, ಈಗಿರುವ ಸ್ಕೀಮ್‌ಗಳನ್ನು ಹಿಂಪಡೆಯಲು ಕೂಡ ಹೊರಟಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಸರ್ಕಾರಿ ನೌಕರರಿಗೆ ಸರಿಯಾದ ಸಮಯಕ್ಕೆ ಸಂಬಳ ಸಿಗುತ್ತಿಲ್ಲ. ತೆಲಂಗಾಣದಲ್ಲಿ ರೈತರಿಗೆ ಭರವಸೆ ನೀಡಿದ ಸಾಲ ಮನ್ನಾಕ್ಕಾಗಿ ಕಾಯುತ್ತಿದ್ದಾರೆ. ಈ ಹಿಂದೆ ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಅವರು ಕೆಲವು ಭರವಸೆ ನೀಡಿದ್ದರು. ಅದನ್ನು ಐದು ವರ್ಷಗಳವರೆಗೆ ಜಾರಿ ಮಾಡಲಿಲ್ಲ. ಕಾಂಗ್ರೆಸ್ ಹೇಗೆ ಕೆಲಸ ಮಾಡುತ್ತದೆ ಎಂಬುದಕ್ಕೆ ಇಂತಹ ಹಲವಾರು ಉದಾಹರಣೆಗಳಿವೆ ಎಂದು ಕಾಂಗ್ರೆಸ್ ವಿರುದ್ಧ ಮೋದಿ ಚಾಟಿ ಬೀಸಿದ್ದಾರೆ.

ಕಾಂಗ್ರೆಸ್‌ನ ಪ್ರಾಯೋಜಿತ ನಕಲಿ ಭರವಸೆಯ ಸಂಸ್ಕೃತಿಯ ವಿರುದ್ಧ ದೇಶದ ಜನತೆ ಎಚ್ಚೆತ್ತುಕೊಳ್ಳಬೇಕಾಗಿದೆ. ಹರಿಯಾಣದ ಜನರು ಕಾಂಗ್ರೆಸ್ ಸುಳ್ಳನ್ನು ತಿರಸ್ಕರಿಸಿದರು. ಸ್ಥಿರ, ಪ್ರಗತಿ ಆಧಾರಿತ ಮತ್ತು ಕಾರ್ಯಚಾಲಿತ ಸರ್ಕಾರಕ್ಕೆ ಆದ್ಯತೆ ನೀಡಿದರು. ಕಾಂಗ್ರೆಸ್‌ಗೆ ನೀಡುವ ಮತವು ಆಡಳಿತವಿಲ್ಲದ, ಕಳಪೆ ಆರ್ಥಿಕತೆ ಮತ್ತು ಸಾಟಿಯಿಲ್ಲದ ಲೂಟಿಗೆ ನೀಡುವ ಮತ ಎಂಬ ಅರಿವು ಭಾರತದಾದ್ಯಂತ ಬೆಳೆಯುತ್ತಿದೆ. ಭಾರತದ ಜನರು ಅಭಿವೃದ್ಧಿ ಮತ್ತು ಪ್ರಗತಿಯನ್ನು ಬಯಸುತ್ತಾರೆ. ಅದೇ ಹಳೆಯ ನಕಲಿ ಭರವಸೆಯ ಕಾಂಗ್ರೆಸ್‌ನ್ನಲ್ಲ. ಕಾಂಗ್ರೆಸ್ ಆಡಳಿತ ಇರುವ ಯಾವುದೇ ರಾಜ್ಯವನ್ನು ಪರಿಶೀಲಿಸಿ. ಹಿಮಾಚಲ ಪ್ರದೇಶ, ಕರ್ನಾಟಕ ಮತ್ತು ತೆಲಂಗಾಣ. ಅಭಿವೃದ್ಧಿಯ ಪಥ ಮತ್ತು ಹಣಕಾಸಿನ ಶಿಸ್ತು ಹದಗೆಡುತ್ತಿದೆ. ಅವರ ಗ್ಯಾರಂಟಿಗಳು ಈಡೇರಿಲ್ಲ. ಇದು ಈ ರಾಜ್ಯಗಳ ಜನರಿಗೆ ಮಾಡಿದ ಭೀಕರ ವಂಚನೆಯಾಗಿದೆ. ಬಡವರು, ಯುವಕರು, ರೈತರು ಮತ್ತು ಮಹಿಳೆಯರು ಇಂತಹ ರಾಜಕೀಯದ ಬಲಿಪಶುಗಳು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!