ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಮುಂದುವರೆದಿದೆ. ಹಿಂದು ಶಿಕ್ಷಕರೊಬ್ಬರ ಮನೆಯನ್ನು ಗುರಿಯಾಗಿಸಿಕೊಂಡು ಬೆಂಕಿ ಹಚ್ಚಲಾಗಿದೆ.
ದಾಳಿಕೋರರು ರಾತ್ರಿ ವೇಳೆ ಮನೆಗೆ ಬೆಂಕಿ ಹಚ್ಚಿದ ಘಟನೆ ಸಂಭವಿಸಿದೆ. ಅದೃಷ್ಟವಶಾತ್, ಘಟನೆಯ ಸಮಯದಲ್ಲಿ ಕುಟುಂಬ ಸದಸ್ಯರು ಸುರಕ್ಷಿತವಾಗಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಶಿಕ್ಷಕ ಬೀರೇಂದ್ರ ಕುಮಾರ್ ಎಂದು ಗುರುತಿಸಿಕೊಳ್ಳಲಾಗಿದೆ.
ಈ ವಾರದ ಆರಂಭದಲ್ಲಿ, ಫೆನಿ ಜಿಲ್ಲೆಯ ದಗನ್‌ಭುಯಾನ್ ಉಪಜಿಲ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಯನ್ನು ದುಷ್ಕರ್ಮಿಗಳು ಕಡಿದು, ಇರಿದು ಕೊಂದಿದ್ದರು. ಬಾಂಗ್ಲಾದೇಶದ ಜಗತ್‌ಪುರ ಗ್ರಾಮದ ಬೆಳೆ ಹೊಲದಿಂದ 27 ವರ್ಷದ ಆಟೋರಿಕ್ಷಾ ಚಾಲಕ ಸಮೀರ್ ದಾಸ್ ಅವರ ಮೃತದೇಹ ಪತ್ತೆಯಾಗಿತ್ತು.ಇದು 24 ದಿನಗಳಲ್ಲಿ ಒಂಬತ್ತನೇ ಘಟನೆಯಾಗಿದ್ದು, ಬಾಂಗ್ಲಾದೇಶದಾದ್ಯಂತ ಹಿಂದು ಸಮುದಾಯಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹಿಂಸಾಚಾರದಲ್ಲಿ ಆತಂಕಕಾರಿ ಏರಿಕೆ ಕಂಡುಬಂದಿದೆ.


