ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದಲ್ಲಿ ಕೋಮು ಘರ್ಷಣೆ ಮತ್ತೆ ಉಲ್ಬಣಗೊಂಡಿದೆ. ರಾಜ್ಯದಲ್ಲಿ ಹಿಂಸಾಚಾರ ಹೆಚ್ಚುತ್ತಿರುವ ಕಾರಣ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ ಮತ್ತು ತೌಬಲ್ ಜಿಲ್ಲೆಗಳಲ್ಲಿ ಕರ್ಫ್ಯೂ ಹೇರಲಾಗಿದೆ.
ಹಿಂದಿನ ಆದೇಶದಲ್ಲಿ, ಇಂಫಾಲ್ ಪೂರ್ವ ಮತ್ತು ಇಂಫಾಲ್ ಪಶ್ಚಿಮದ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಆಯಾ ಜಿಲ್ಲೆಗಳಲ್ಲಿ ಮಂಗಳವಾರ ಬೆಳಿಗ್ಗೆ 5 ರಿಂದ 10 ರವರೆಗೆ ಕರ್ಫ್ಯೂ ಸಡಿಲಿಸುವುದಾಗಿ ಘೋಷಿಸಿದ್ದರು.
ಆದಾಗ್ಯೂ ಜಿಲ್ಲೆಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಸಡಿಲಿಕೆ ಆದೇಶವನ್ನು ರದ್ದುಗೊಳಿಸಲಾಗಿದೆ ಮತ್ತು ಎರಡೂ ಜಿಲ್ಲೆಗಳಲ್ಲಿ ಕರ್ಫ್ಯೂ ಮರು ಹೇರಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.