ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಸಭೆಯಲ್ಲಿ ಅಶಿಸ್ತಿನ ವರ್ತನೆ ತೋರಿದ ಆಪ್‌ನ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರನ್ನು ಅಮಾನತು ಗೊಳಿಸಲಾಗಿದೆ. ಕಲಾಪಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ವಾರದ ಕಲಾಪದ ಮುಂದಿನ ಭಾಗಗಳಿಗೂ ಅವರನ್ನು ಅಮಾನತುಗೊಳಿಸಲಾಗಿದೆ.
ಸಿಂಗ್ ಅವರನ್ನು ಅಮಾನತುಗೊಳಿಸುವ ಪ್ರಸ್ತಾವನೆಯನ್ನು ರಾಜ್ಯಸಭೆ ಬುಧವಾರ ಅಂಗೀಕರಿಸಿದೆ. “ಎಎಪಿ ಸಂಸದ ಸಂಜಯ್ ಸಿಂಗ್ ಅವರು ನಿನ್ನೆ ಘೋಷಣೆಗಳನ್ನು ಕೂಗಿದ, ಕಾಗದಗಳನ್ನು ಹರಿದು ಕುರ್ಚಿಯತ್ತ ಎಸೆದಿದ್ದಕ್ಕಾಗಿ ಪ್ರಸ್ತುತ ವಾರದ ಉಳಿದ ಭಾಗಕ್ಕೆ ರಾಜ್ಯಸಭೆಯಿಂದ ಅಮಾನತುಗೊಂಡಿದ್ದಾರೆ” ಎಂದು ರಾಜ್ಯಸಭೆಯ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ಹೇಳಿದ್ದಾರೆ. ಅಲ್ಲದೇ ಸಿಂಗ್ ಅವರ ಈ ವರ್ತನೆಯು ಸದನದ ನಿಯಮಗಳು ಮತ್ತು ಅಧ್ಯಕ್ಷರ ಅಧಿಕಾರವನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ರಾಜ್ಯಸಭಾ ಉಪ ಸಭಾಪತಿ ಹೇಳಿದ್ದಾರೆ.
ಈ ಹಿಂದೆ ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ವಿರೋಧ ಪಕ್ಷದ 19 ಸಂಸದರನ್ನು ಸದನದಿಂದ ಅಮಾನತುಗೊಳಿಸಲಾಗಿತ್ತು.
.