ಶಿರೂರು ಗುಡ್ಡ ಕುಸಿತಕ್ಕೆ ಅವೈಜ್ಞಾನಿಕ ಕಾಮಗಾರಿ ಕಾರಣ: ಹಸಿರುಪೀಠ ಅಭಿಮತ

ಹೊಸದಿಗಂತ ಅಂಕೋಲಾ:

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಐ.ಆರ್. ಬಿ ಕಂಪನಿ ಚಥುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಂದರ್ಭದಲ್ಲಿ ಸೂಕ್ತ ಅಧ್ಯಯನ ನಡೆಸದೆ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸಿರುವುದು ಶಿರೂರು ಗುಡ್ಡ ಕುಸಿತ ದುರಂತ ಸಂಭವಿಸಲು ಕಾರಣವಾಗಿದೆ ಎಂದು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿದ್ದು ಈ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಕೇಂದ್ರ ಅರಣ್ಯ ಸಚಿವಾಲಯ ಹಾಗೂ ಉತ್ತರ ಕನ್ನಡ ಜಿಲ್ಲಾಡಳಿತದಿಂದ ವಿವರಗಳನ್ನು ಕೇಳಿ ನೋಟಿಸ್ ಜಾರಿ ಮಾಡಿದೆ.

ಜಿಯಾಲಾಜಿಕಲ್ ಸರ್ವೆ ಆಪ್ ಇಂಡಿಯಾ ನೀಡಿರುವ ಪ್ರಾಥಮಿಕ ವರದಿಯ ಆಧಾರದಲ್ಲಿ ಪ್ರಕರಣ ದಾಖಲಿಸಿರುವ ಹಸಿರು ಪೀಠ ರಸ್ತೆ ಯೋಜನೆಗಳನ್ನು ಕಾರ್ಯಗತಗೊಳಿಸುವ ಪೂರ್ವದಲ್ಲಿ ಅಲ್ಲಿನ ಭೂ ಪ್ರದೇಶದ ಸಮಗ್ರ ಅಧ್ಯಯನ ನಡೆಸುವುದು ಸೂಕ್ತ ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಪರಿಸರ ಕಾಯ್ದೆಯ ಉಲ್ಲಂಘನೆ ಆಗಿರುವುದು ಸ್ಪಷ್ಟ ಎಂದು ಅಭಿಪ್ರಾಯಪಟ್ಟಿದೆ.

ಕರಾವಳಿ ಪ್ರದೇಶದಲ್ಲಿ ಹೆಚ್ಚಿನ ಮಳೆ ಆಗುವ ಕಾರಣ ನೀರಿನ ನೈಸರ್ಗಿಕ ಹರಿವಿಗೆ ಅಡ್ಡಿ ಆಗದಂತೆ ಗುಡ್ಡ ಗಳನ್ನು ಹಂತ ಹಂತವಾಗಿ ಕತ್ತರಿಸುವ ಕುರಿತು ತಜ್ಞರು ಸಾಕಷ್ಟು ಬಾರಿ ಎಚ್ಚರಿಕೆ ನೀಡಿದ್ದಾರೆ ಆದರೆ
ಚಥುಷ್ಪತ ಕಾಮಗಾರಿ ಸಂದರ್ಭದಲ್ಲಿ ತಜ್ಞರ ಅಭಿಪ್ರಾಯವನ್ನು ಕಡೆಗಣಿಸಿ ಅವೈಜ್ಞಾನಿಕವಾಗಿ ಗುಡ್ಡಗಳನ್ನು ಕೊರೆಯಲಾಗಿದ್ದು ಭಾರೀ ಮಳೆಯಿಂದಾಗಿ ಭೂ ಕುಸಿತ ಸಂಭವಿಸಿದೆ ಎಂದು ನ್ಯಾಯಪೀಠದ ಆದೇಶದಲ್ಲಿ ಉಲ್ಲೇಖಿಸಲಾಗಿದ್ದು ಪ್ರಕರಣದ ವಿಚಾರಣೆಯನ್ನು ದಕ್ಷಿಣ ವಲಯ ಪೀಠಕ್ಕೆ ವರ್ಗಾಯಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!