ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಯಚೂರಿನಲ್ಲಿ ಬಾಣಂತಿಯರ ಸರಣಿ ಸಾವು ಮುಂದುವರೆದಿದ್ದು, ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ.
ಶಿವಲಿಂಗಮ್ಮ (21) ಎಂಬ ಮಹಿಳೆ ಮೃತಪಟ್ಟಿದ್ದು, ತಾಯಿ ಹಾಗೂ ಮಗು ಮೃತಪಟ್ಟಿದ್ದಾರೆ. ಶಿವಲಿಂಗಮ್ಮಗೆ ಸಿಜೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು, ಆದರೆ ಇಂದು ಮುಂಜಾನೆ ಶಿವಲಿಂಗಮ್ಮ ಹಾಗೂ ಮಗು ಮೃತಪಟ್ಟಿದ್ದಾರೆ.
ವೈದ್ಯರ ನಿರ್ಲಕ್ಷ್ಯದಿಂದ ತಾಯಿ ಮತ್ತು ಮಗು ಸಾವನ್ನಪ್ಪಿದೆ ಎಂದು ಮಹಿಳೆಯ ಕುಟುಂಬದವರು ಆರೋಪಿಸಿದ್ದಾರೆ.