ಹೊಸದಿಗಂತ ಡಿಜಿಟಲ್ ಡೆಸ್ಕ್:
ಈಶಾನ್ಯ ರಾಜ್ಯ ತ್ರಿಪುರಾದಲ್ಲಿ ಬಿಸಿಗಾಳಿ ಹೆಚ್ಚಾಗಿದ್ದು, ಏ.23ರವರೆಗೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಮಕ್ಕಳು ಶಾಲೆಗೆ ಹೋಗಿ ಬರುವಾಗ ಬಿಸಿಲಿನ ತಾಪ ಎದುರಿಸಬೇಕಾಗಿದ್ದು, ಇದರಿಂದ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ಈ ಕಾರಣದಿಂದ ಏ.18ರಿಂದ 23ರವರೆಗೆ ಶಾಲೆಗಳನ್ನು ಮುಚ್ಚಲಾಗುವುದು ಎಂದು ಸಿಎಂ ಮಾಣಿಕ್ ಸಹಾ ಹೇಳಿದ್ದಾರೆ.
ಬಿಸಿಲಿನ ತಾಪದಿಂದ ಮಕ್ಕಳು ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದಾರೆ. ಖಾಸಗಿ ಶಾಲೆಗಳೂ ರಜೆ ಘೋಷಿಸಿ ಎಂದು ಸಿಎಂ ಹೇಳಿದ್ದಾರೆ. ರಜೆ ಕಾರಣದಿಂದ ಮಕ್ಕಳು ಬಿಸಿಲಿನಲ್ಲಿ ಆಡುವುದು, ಸುತ್ತುವುದು ಮಾಡದೇ ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ಮನೆಯಲ್ಲೇ ಇರುವಂತೆ ಸೂಚನೆ ನೀಡಲಾಗಿದೆ.