ಹೊಸದಿಗಂತ ಡಿಜಿಟಲ್ ಡೆಸ್ಕ್:
ವಕ್ಫ್ (ತಿದ್ದುಪಡಿ) ಕಾಯ್ದೆ ವಿರೋಧದ ದಳ್ಳುರಿ ಮತ್ತಷ್ಟು ಜಿಲ್ಲೆಗಳಿಗೆ ವಿಸ್ತರಿಸುತ್ತಿದ್ದು, ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.
ವಕ್ಫ್ ಕಾಯ್ದೆ ವಿರೋಧಿ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್‌ಎಫ್) ಬೆಂಬಲಿಗರು ತೆರಳುತ್ತಿದ್ದ ವೇಳೆ ಪೊಲೀಸರು ಅವರನ್ನು ತಡೆದಿದ್ದು, ಈ ವೇಳೆ ಕಾರ್ಯಕರ್ತರು ಪೊಲೀಸರ ಜೊತೆ ವಾಗ್ವಾದಕ್ಕೆ ಇಳಿದು ಘರ್ಷಣೆ ಪ್ರಾರಂಭವಾಗಿ ಹಿಂಸಾಚಾರಕ್ಕೆ ತಿರುಗಿದೆ.
ಸ್ಥಳದಲ್ಲೇ ಇದ್ದ ಪೊಲೀಸ್ ವಾಹನಗಳಿಗೆ ಕಾರ್ಯಕರ್ತರು ಬೆಂಕಿ ಹಚ್ಚಿದ್ದು, ಇದರಲ್ಲಿ ಹಲವು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.