ಗಡಿಯಾಚೆಗಿನ ಭಯೋತ್ಪಾದನೆ ನಿಲ್ಲುವವರೆಗೆ ಪಾಪಿ ರಾಷ್ಟ್ರಕ್ಕೆ ‘ಜಲ ಕಂಟಕ’ ತಪ್ಪಿದ್ದಲ್ಲ!!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ-ಪಾಕಿಸ್ತಾನ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಈಗಾಗಲೇ ಘೋಷಿಸಲಾಗಿರುವ ಸಿಂಧೂ ಜಲ ಒಪ್ಪಂದ ರದ್ದು ವಿಚಾರದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಭಾರತ ಆರಂಭದಲ್ಲೇ ಸ್ಪಷ್ಟಪಡಿಸಿತ್ತು. ಇದೀಗ ಮತ್ತೆ ಅದೇ ವಿಚಾರವನ್ನು ವಿದೇಶಾಂಗ ಸಚಿವಾಲಯ ಪುನರುಚ್ಚರಿಸಿದೆ.

ಪಾಕಿಸ್ತಾನ ಗಡಿಯಾಚೆಗಿನ ಭಯೋತ್ಪಾದನೆಯನ್ನು ನಿಲ್ಲಿಸುವವರೆಗೆ ಸಿಂಧೂ ಜಲ ಒಪ್ಪಂದವನ್ನು ತಡೆಹಿಡಿಯಲಾಗುವುದು ಎಂದು ಭಾರತದ ವಿದೇಶಾಂಗ ಸಚಿವಾಲಯ ಹೇಳಿದೆ.

ಪಾಕಿಸ್ತಾನದ ಕಡೆಯಿಂದ ನೀಡಲಾದ ಹೇಳಿಕೆಯನ್ನು ನಾವು ನೋಡಿದ್ದೇವೆ. ಕೈಗಾರಿಕಾ ಮಟ್ಟದಲ್ಲಿ ಭಯೋತ್ಪಾದನೆಯನ್ನು ಪೋಷಿಸಿದ ರಾಷ್ಟ್ರವು ಅದರ ಪರಿಣಾಮಗಳಿಂದ ತಪ್ಪಿಸಿಕೊಳ್ಳಬಹುದು ಎಂದು ಭಾವಿಸುವ ಮೂಲಕ ತನ್ನನ್ನು ತಾನು ಮೂರ್ಖನನ್ನಾಗಿ ಮಾಡಿಕೊಳ್ಳುತ್ತಿದೆ. ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ತನ್ನ ಬೆಂಬಲವನ್ನು ಪೂರ್ತಿಯಾಗಿ ಹಿಂಪಡೆಯುವವರೆಗೂ ಭಾರತ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುತ್ತದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಸ್ಪಷ್ಟನೆ ನೀಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!