Tuesday, June 28, 2022

Latest Posts

ಜೂ.30ರವರೆಗೆ ಅವಳಿ ಜಿಲ್ಲೆಗಳಲ್ಲಿ ಮದುವೆ ಸೇರಿದಂತೆ ಎಲ್ಲಾ ಸಮಾರಂಭಗಳಿಗೆ ನಿಷೇಧ: ಡಿಸಿ ಆದೇಶ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸ ದಿಗಂತ ವರದಿ, ಬಳ್ಳಾರಿ:

ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಜೂ.30ರವರೆಗೆ ಮದುವೆ ಸಮಾರಂಭ ಸೇರಿದಂತೆ ಎಲ್ಲಾ ರೀತಿಯ ಸಾಮಾಜಿಕ ಕಾರ್ಯಕ್ರಮಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಆದೇಶ ಹೊರಡಿಸಿದ್ದಾರೆ.
ರಾಜ್ಯ ಸರಕಾರವು ಬಳ್ಳಾರಿ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈಗಾಗಲೇ ವಿಧಿಸಲಾದ ನಿರ್ಬಂಧಗಳನ್ನು ಸಡಿಲಿಕರಣಗೊಳಿಸಿ ಜೂ.14ರ ಬೆಳಗ್ಗೆ 6ರಿಂದ 21ರ ಬೆಳಗ್ಗೆ 6ರವರೆಗೆ ಕೆಲವೊಂದು ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ನಿಗದಿಪಡಿಸಿದ ಸಮಯದಲ್ಲಿ ಅನುಮತಿಸಲಾದ ಚಟುವಟಿಕೆಗಳಿಗೆ ಮಾತ್ರ ಅನುಮತಿ ನೀಡುತ್ತಾ, ಉಳಿದಂತೆ ಸಾರ್ವಜನಿಕರ ಅನಗತ್ಯ ಓಡಾಟ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಜೂ.14ರಿಂದ ಜೂ.21ರವರೆಗೆ ಅವಳಿ ಜಿಲ್ಲೆಯಲ್ಲಿ ಸಂಜೆ 7ರಿಂದ ಬೆಳಗ್ಗೆ 5ರವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಇದರ ಜೊತೆಗೆ ಜೂ.18ರ ಸಂಜೆ 7ರಿಂದ ಜೂ.21ರ ಬೆಳಗ್ಗೆ 5ರವರೆಗೆ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರಲಿದೆ.
ಆದೇಶ ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ಸೆಕ್ಷನ್ 51ರಿಂದ 60ಹಾಗೂ ಐಪಿಸಿ ಸೆಕ್ಷನ್ 188 ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಅನ್ವಯ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಎಚ್ಚರಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss